ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ 35,024 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ರಾಜ್ಯ( ಬೆಂಗಳೂರು)ಏ.30:- ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ದಾಖಲೆಯ 270 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ 15,306ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 35,024 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 14,74,846ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ 19,637 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 7,29,984ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ 143 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ 14,142 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 11,10,025ಕ್ಕೆ ಏರಿಕೆಯಾಗಿದೆ. 3,49,496 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 2,431 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

comments

Related Articles

error: