ಕ್ರೀಡೆದೇಶಪ್ರಮುಖ ಸುದ್ದಿ

ರಾಜಸ್ಥಾನ ರಾಯಲ್ಸ್ ತಂಡವನ್ನು ಸೋಲಿಸಿದ ಮುಂಬೈ ಇಂಡಿಯನ್ಸ್

ದೇಶ(ನವದೆಹಲಿ)ಏ.30:- ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ 7 ವಿಕೆಟ್‌ ಗಳಿಂದ ರಾಜಸ್ಥಾನ ರಾಯಲ್ಸ್ ತಂಡವನ್ನು ಸೋಲಿಸಿದೆ.
ಟೂರ್ನಿಯುದ್ದಕ್ಕೂ ರನ್‌ ಗಳಿಸಲು ಪರದಾಡಿದ್ದ ಕ್ವಿಂಟನ್ ಡಿಕಾಕ್ (70 ರನ್, 50 ಎಸೆತ, 6 ಬೌಂಡರಿ, 2 ಸಿಕ್ಸರ್) ಬಿರುಸಿನ ಬ್ಯಾಟಿಂಗ್ ಮೂಲಕ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ ಸಂಘಟಿತ ಬ್ಯಾಟಿಂಗ್ ಹೋರಾಟದ ಫಲವಾಗಿ 4 ವಿಕೆಟ್‌ಗೆ 171 ರನ್ ಕಲೆಹಾಕಿತು. ಬಳಿಕ ಈ ಸ್ಪರ್ಧಾತ್ಮಕ ಮೊತ್ತ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಆರಂಭಿಕ ವೈಫಲ್ಯದ ನಡುವೆಯೂ 18.3 ಓವರ್‌ಗಳಲ್ಲಿ 3 ವಿಕೆಟ್‌ಗೆ 172 ರನ್‌ ಗಳಿಸಿ ಜಯದ ನಗೆ ಬೀರಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: