ದೇಶಪ್ರಮುಖ ಸುದ್ದಿ

ಕೊರೊನಾ ಸೋಂಕಿನಿಂದ ಗುಣಮುಖರಾದ ಸಿಎಂ ಯೋಗಿ ಆದಿತ್ಯನಾಥ್

ಲಖನೌ,ಏ.30-ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೊರೊನಾ ಸೋಂಕಿನಿಂದ ಗುಣಮುಖವಾಗಿದ್ದಾರೆ.

ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ನಿಮ್ಮ ಶುಭಹಾರೈಕೆ ಹಾಗೂ ವೈದ್ಯರ ಕಾಳಜಿಯಿಂದಾಗಿ, ನಾನು ಕೊರೊನಾ ವೈರಸ್ ಸೋಂಕಿನಿಂದ ಚೇತರಿಸಿಕೊಂಡಿದ್ದೇನೆ. ನನ್ನ ವರದಿ ನೆಗೆಟಿವ್ ಬಂದಿದೆ. ನಿಮ್ಮ ಸಹಕಾರ ಮತ್ತು ಶುಭಕಾಮನೆಗಳಿಗಾಗಿ ನಾನು ಎಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟ ಬಳಿಕ ಯೋಗಿ ಆದಿತ್ಯನಾಥ್ ಅವರು ಏ.13 ರಿಂದ ತಮ್ಮನ್ನು ತಾವು ಐಸೋಲೇಟ್ ಮಾಡಿಕೊಂಡಿದ್ದರು. ಎರಡು ವಾರಗಳ ಪ್ರತ್ಯೇಕತೆಯ ಸಮಯದಲ್ಲಿ, ಮುಖ್ಯಮಂತ್ರಿಗಳು ತಮ್ಮ ಕೆಲಸವನ್ನು ವರ್ಚುವಲ್ ಆಗಿ ನಿರ್ವಹಿಸಿದ್ದರು. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: