ಕರ್ನಾಟಕಪ್ರಮುಖ ಸುದ್ದಿ

ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ, ಬಸವ ಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು :, ಮಸ್ಕಿಯಲ್ಲಿ ಕಾಂಗ್ರೆಸ್ ಗೆ ಗೆಲುವು

ರಾಜ್ಯ( ಬೆಳಗಾವಿ)ಮೇ.2:- ಕೊನೆಹಂತದ ಜಿದ್ದಾಜಿದ್ದಿ ಹೋರಾಟದಲ್ಲಿ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಅಂಗಳ ಅಂಗಡಿ ಸುಮಾರು ಮೂರು ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕೊನೆಯ ಹಂತದ ಹಣಾಹಣಿಯಲ್ಲಿ ನಡೆದ ತೀವ್ರ ಜಿದ್ದಾಜಿದ್ದಿನ ಹೋರಾಟದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳ ಅಂಗಡಿ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಜಯ ಸಾಧಿಸಿದ್ದಾರೆ. ಗೆಲುವಿನ ಸುದ್ದಿ ಕೇಳುತ್ತಿದ್ದಂತೆಯೇ ಭಾವುಕರಾದ ಮಂಗಳ ಅಂಗಡಿಯವರು ದಿವಂಗತ ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ನಮಿಸಿ ಕಣ್ಣೀರು ಮಿಡಿದಿದ್ದಾರೆ.

ಮಂಗಳಾ ಅಂಗಡಿ 4,35,202 ಮತಗಳನ್ನು ಪಡೆದು ಜಯಭೇರಿ ಭಾರಿಸಿದರು. ಸತೀಶ್​ ಜಾರಕಿಹೊಳಿ 4,32,299 ಮತಗಳನ್ನು ಪಡೆಯುವ ಮೂಲಕ ಪರಾಭವಗೊಂಡರು.
ಇದೇ ವೇಳೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಅವರು ಹಾಗೂ ಮಸ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ್ ಗೆಲುವು ಸಾಧಿಸಿದ್ದಾರೆ. ಅಪರೇಷನ್ ಕಮಲದ ಮೂಲಕ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರ್ಪಡೆಯಾಗಿದ್ದ ಪ್ರತಾಪ್ ಗೌಡ ಪಾಟೀಲ್‍ ಗೆ ತೀವ್ರ ಹಿನ್ನಡೆಯಾಗಿದೆ.

Leave a Reply

comments

Related Articles

error: