ದೇಶಪ್ರಮುಖ ಸುದ್ದಿ

ಪ್ರಮಾಣ ವಚನ ಸ್ವೀಕಾರ ದಿನಾಂಕ ಶೀಘ್ರದಲ್ಲೇ ಪ್ರಕಟ : ಡಿಎಂಕೆ ನಾಯಕ ಸ್ಟಾಲಿನ್

ದೇಶ(ಚೆನ್ನೈ)ಮೇ.3:- ತಮಿಳು ನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಕೂಟಕ್ಕೆ ಅತಿ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಿದ್ದಕ್ಕಾಗಿ ನಾನು ತಮಿಳು ನಾಡಿನ ಜನತೆಗೆ ಧನ್ಯವಾದಗಳನ್ನು ತಿಳಿಸುತ್ತೇನೆ, ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ನಿರ್ದಿಷ್ಟ ಭರವಸೆಗಳನ್ನು ಹಂತಹಂತವಾಗಿ ಈಡೇರಿಸುತ್ತೇವೆ ಎಂದು ಡಿಎಂಕೆ ನಾಯಕ ತಮಿಳು ನಾಡಿನ ಭಾವೀ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಹೇಳಿದ್ದಾರೆ.
ಫಲಿತಾಂಶ ಹೊರಬಿದ್ದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ದಿನವನ್ನು ಮೇ.3ಕ್ಕೆ ಅಥವಾ ಮೇ.4ಕ್ಕೆ ಪ್ರಕಟಿಸುವುದಾಗಿ ತಿಳಿಸಿದರು.
ಚುನಾವಣೆಯಲ್ಲಿ ಗೆದ್ದ ನಮಗೆ ಅಭಿನಂದನೆ ಸಲ್ಲಿಸುತ್ತಿರುವ ಎಲ್ಲಾ ನಾಯಕರಿಗೆ ನಾನು ಧನ್ಯವಾದಗಳನ್ನು ಹೇಳುತ್ತೇನೆ. ರಾಜಕೀಯ ಹಿರಿಯ ನಾಯಕರ ಸಲಹೆ, ಸಹಕಾರವನ್ನು ಈ ಸಂದರ್ಭದಲ್ಲಿ ಕೋರುತ್ತೇನೆ. ಪಕ್ಷದ ನೂತನ ಶಾಸಕರ ಸಭೆ ಕರೆದು ಅಧ್ಯಕ್ಷರನ್ನು ಔಪಚಾರಿಕವಾಗಿ ಆರಿಸುತ್ತೇವೆ ಎಂದು ಹೇಳಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: