ಕರ್ನಾಟಕಪ್ರಮುಖ ಸುದ್ದಿಮೈಸೂರು

ಚಾಮರಾಜನಗರ ಆಕ್ಸಿಜನ್ ಕೊರತೆ ಘಟನೆ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಬೇಕು : ಧೃವನಾರಾಯಣ್ ಒತ್ತಾಯ

ಮೈಸೂರು,ಮೇ.3:- ಚಾಮರಾಜನಗರದ ಆಕ್ಸಿಜನ್ ಕೊರತೆಯಿಂದ 22ಮಂದಿ ಮೃತ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಂಸದ ಆರ್.ಧ್ರುವನಾರಾಯಣ್  ಈ ವಿಚಾರದಲ್ಲಿ ಚಾಮರಾಜನಗರ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಹಿಸಿದ್ದರೆ  ಅನಾಹುತ ತಪ್ಪಿಸಬಹುದಿತ್ತು. ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳೇ ಈ ಘಟನೆಗೆ ನೇರ ಕಾರಣ. ಇದು ದೊಡ್ಡ ಕ್ರಿಮಿನಲ್ ಅಪರಾಧವಾಗಿದೆ. ಅಲ್ಲಿನ ಡಿಸಿ, ಸಚಿವರ ಜೊತೆ ನಿನ್ನೆಯೇ ದೂರವಾಣಿ ಮೂಲಕ ಸಂಪರ್ಕಿಸಿದ್ದೆ, ಆದರೆ ಸಂಪರ್ಕಕ್ಕೆ ಸಿಗಲಿಲ್ಲ ಆದರೆ ಇಂದು ಬೆಳಗ್ಗೆ ಕರೆ ಮಾಡಿ ಸಮಸ್ಯೆ ಇಲ್ಲ ಎಂದರು. ಒಂದು ವಾರದ ಹಿಂದೆಯೇ ಜಿಲ್ಲೆಯಲ್ಲಿ ಸಮಸ್ಯೆ ಇದೆ ಎಂದು ಗೊತ್ತಿದ್ದರೂ ಸುಮ್ಮನಿದ್ದಿದ್ದು ಅಪರಾಧ. ಜನಪ್ರತಿನಿಧಿಗಳಾಗಿ ನಾವು ಜನರ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ಕೊಡಲೇಬೇಕು. ಈ ಘಟನೆ ಬಗ್ಗೆ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಶಿಕ್ಷೆಗೊಳಪಡಿಸಬೇಕು ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: