ಕರ್ನಾಟಕಪ್ರಮುಖ ಸುದ್ದಿ

ಲಾಕ್ ಡೌನ್ ವಿಚಾರ : ಪಿಎಂ ಮೋದಿಯವರ ನಿರ್ದೇಶನಕ್ಕೆ ಕಾಯುತ್ತಿದ್ದೇವೆ ; ಸಿಎಂ ಬಿಎಸ್ ವೈ

ರಾಜ್ಯ(ಬೆಂಗಳೂರು)ಮೇ.5:- ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನತಾ ಕರ್ಫ್ಯೂ ಜಾರಿಯಲ್ಲಿದ್ದು ಲಾಕ್ ಡೌನ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರ ನಿರ್ದೇಶನಕ್ಕಾಗಿ ಕಾಯುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರ ನಿರ್ದೇಶನದಂತೆ ನಡೆದುಕೊಳ್ಳುತ್ತೇವೆ. ಪ್ರಧಾನಿಯವರು ಹೇಳಿದಂತೆ ಲಾಕ್ ಡೌನ್ ಮಾಡುತ್ತೇವೆ. ಮೋದಿಯವರಿಂದ ಬರುವ ಸಲಹೆ ಸೂಚನೆಗಳನ್ನು ಪಾಲಿಸುತ್ತೇವೆ. ಪ್ರಧಾನಿ ಮೋದಿಯವರ ನಿರ್ಧಾರಕ್ಕೆ ನಾವು ಬದ್ಧ ಎಂದಿದ್ದಾರೆ.

ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ  ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: