ದೇಶಪ್ರಮುಖ ಸುದ್ದಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸ್ವೀಕಾರ

ಕೋಲ್ಕತ್ತಾ,ಮೇ 5- ತೃಣಮೂಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಕೋಲ್ಕತ್ತಾದ ರಾಜ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಮತಾ ಅವರು 3ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಮಮತಾ ಅವರಿಗೆ ರಾಜ್ಯಪಾಲ ಜಗದೀಪ್ ಧನಕರ್ ಅವರು ಪ್ರತಿಜ್ಞಾವಿಧಿ ಭೋಧಿಸಿದರು.

ರಾಜ್ಯದಲ್ಲಿ ಕೋವಿಡ್ -19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಮಾವಳಿಗಳ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು ಸರಳವಾಗಿ ಪ್ರಮಾಣವಚನ ಕಾರ್ಯಕ್ರಮವನ್ನು ನಡೆಸಲಾಗಿದೆ.

ಉಳಿದ ಸಂಪುಟ ಸಚಿವರು ಹಾಗೂ ಕೌನ್ಸಿಲ್ ಸಚಿವರು ರವೀಂದ್ರನಾಥ ಟಾಗೋರ್ ಜನ್ಮದಿನವಾದ ಮೇ 9ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಮಮತಾ ನೇತೃತ್ವದ ಟಿಎಂಸಿ ಬಂಗಾಳ ಚುನಾವಣೆಯಲ್ಲಿ 292 ಸೀಟುಗಳಲ್ಲಿ 213 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಪ್ರಬಲ ಎದುರಾಳಿ ಬಿಜೆಪಿ 77 ಸೀಟುಗಳನ್ನು ಗೆದ್ದುಕೊಂಡಿತ್ತು. (ಏಜೆನ್ಸೀಸ್, ಎಂ.ಎನ್)

 

Leave a Reply

comments

Related Articles

error: