ಮೈಸೂರು

ಮುಖ್ಯಮಂತ್ರಿಗಳ ಕಾರಿಗೆ ಕಪ್ಪು ಬಾವುಟ ಪ್ರದರ್ಶನ ಪ್ರಕರಣ : ಇನ್ಸಪೆಕ್ಟರ್ ಅಮಾನತು

ಮಂಡ್ಯ: ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿಗಳ ಕಾರನ್ನು ತಡೆದು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಇನ್ಸ್ ಪೆಕ್ಟರ್ ಅಮಾನತುಗೊಂಡಿದ್ದಾರೆ.

ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ದೇವರಾಜು ಅವರನ್ನು ಅಮಾನುತು ಮಾಡಿ ಮಂಡ್ಯ ಎಸ್‍ಪಿ ಸುಧೀರ್‍ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಇದೇ ತಿಂಗಳು 20 ರಂದು ಮಳವಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿಗಳ ಕಾರನ್ನು ತಡೆದು ಕಪ್ಪು ಬಾವುಟ ಪ್ರದರ್ಶಿಸಿ, ಬರಗಾಲದಲ್ಲಿ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಆಗ್ರಹಿಸಿದ್ದರು. ಇದರಿಂದ ಕುಪಿತಗೊಂಡ ಮುಖ್ಯಮಂತ್ರಿಗಳು ವೇದಿಕೆಯ ಮೇಲೆಯೇ ಮಂಡ್ಯ ಪೊಲೀಸ್ ವರಿಷ್ಟಾಧಿಕಾರಿ ಸುಧೀರ್‍ಕುಮಾರ್ ರೆಡ್ಡಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‍ಐ ದೇವರಾಜು ಅಮಾನತುಗೊಂಡಿದ್ದಾರೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: