ದೇಶಪ್ರಮುಖ ಸುದ್ದಿ

ಕರ್ನಾಟಕ ಸೇರಿ ದೇಶದ ಪ್ರಮುಖ ನಗರಗಳಲ್ಲಿ ಕೋವಿಡ್-19 ಪರಿಸ್ಥಿತಿ ಹದಗೆಡುತ್ತಿದೆ : ಕೇಂದ್ರ ಕಳವಳ

ದೇಶ( ನವದೆಹಲಿ)ಮೇ.8:- ಕೇಂದ್ರ ಆರೋಗ್ಯ ಇಲಾಖೆ ಕರ್ನಾಟಕದ ಬೆಂಗಳೂರು, ಮೈಸೂರು, ತುಮಕೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಕೋವಿಡ್-19 ಪರಿಸ್ಥಿತಿ ಹದಗೆಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದೆ.

ದೆಹಲಿಯಲ್ಲಿ ಆರೋಗ್ಯ ಸಚಿವಾಲಯದ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಆರತಿ ಅಹುಜಾ ಅವರು, ‘ಬೆಂಗಳೂರಿನಲ್ಲಿ ಕಳೆದ 15 ದಿನಗಳಿಂದ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಚೆನ್ನೈ, ಕೊಯಿಕ್ಕೋಡ್, ಗುರುಗ್ರಾಮ, ಮೈಸೂರು, ತುಮಕೂರು, ಚಿತ್ತೂರು ಜಿಲ್ಲೆ ಮತ್ತು ನಗರಗಳಲ್ಲಿಯೂ ಕೊರೊನಾ ಸೋಂಕು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಮಹಾರಾಷ್ಟ್ರ, ಉತ್ತರ ಪ್ರದೇಶ, ದೆಹಲಿ ಮತ್ತು ಛತ್ತೀಸ್‌ ಗಢ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸೋಂಕು ಪ್ರಮಾಣ ಇಳಿಮುಖದತ್ತ ಸಾಗಿದೆ, ದೈನಂದಿನ ಸೋಂಕಿನ ಪ್ರಮಾಣ ಕೂಡ ಕಳೆದ ನಾಲ್ಕೈದು ದಿನಗಳಿಂದ ಇಳಿಕೆಯಾಗುತ್ತಿದೆ. ಆದರೆ ಕರ್ನಾಟಕ, ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಒಡಿಶಾಗಳಲ್ಲಿ ದೈನಂದಿನ ಹೊಸ ಸೋಂಕಿನ ಪ್ರಕರಣಗಳಲ್ಲಿ ಮೇಲ್ಮುಖ ಪ್ರವೃತ್ತಿ ಇದೆ ಎಂದು ಆರತಿ ಅಹುಜಾ ಹೇಳಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: