ದೇಶಪ್ರಮುಖ ಸುದ್ದಿ

ಆಂಧ್ರಪ್ರದೇಶದ ಕಲ್ಲು ಕ್ವಾರಿಯಲ್ಲಿ ಸ್ಫೋಟ: 10 ಮಂದಿ ಕಾರ್ಮಿಕರ ಸಾವು

ಅಮರಾವತಿ,ಮೇ 8-ಆಂಧ್ರಪ್ರದೇಶದ ಕಡಪ ಜಿಲ್ಲೆಯ ಕಲ್ಲು ಕ್ವಾರಿಯೊಂದರಲ್ಲಿ ಜಿಲೆಟಿನ್ ಸ್ಫೋಟ ಸಂಭವಿಸಿ 10 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಕಲ್ಲುಗಳನ್ನು ಒಡೆಯಲು ರಂಧ್ರ ಕೊರೆಯುತ್ತಿದ್ದಾಗ ಸ್ಫೋಟಕಗಳು ಸಿಡಿದಿರುವುದು ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ.

ಮಾಮಿಲಪಲ್ಲಿ ಗ್ರಾಮದ ಹೊರವಲಯದಲ್ಲಿರುವ ಗಣಿಯೊಂದರಲ್ಲಿ ಜಿಲೆಟಿನ್‌ ಕಡ್ಡಿಗಳನ್ನು ಇಳಿಸುವಾಗ ಸ್ಫೋಟ ಸಂಭವಿಸಿದೆ. ಇದು ಪರವಾನಗಿ ಪಡೆದ ಗಣಿಯಾಗಿದೆ ಎಂದು ಕಡಪ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಅನ್ಬುರಾಜನ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ವೈ.ಎಸ್.ಜಗನ್‌ ಮೋಹನ್ ರೆಡ್ಡಿ ಅವರು ಕಡಪ ಜಿಲ್ಲಾಧಿಕಾರಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಸ್ಫೋಟದ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿಯವರು ಕಡಪ ಜಿಲ್ಲೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ, ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರ ಕುರಿತು ತೀವ್ರ ಸಂತಾಪ ಸೂಚಿಸಿದ್ದಾರೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: