ಮೈಸೂರು

ಮೈಸೂರು ಜಿಲ್ಲೆಯಲ್ಲಿ ಇಂದು 2294 ಕೊರೊನಾ ಪ್ರಕರಣ ಪತ್ತೆ

ಮೈಸೂರು, ಮೇ.8:- ಮೈಸೂರು ಜಿಲ್ಲೆ ಯಲ್ಲಿಂದು 2,294 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ ಆಗಿದೆ.

ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 96,893 ಕ್ಕೇರಿಕೆ ಆಗಿದೆ. ಇಂದು 2,484 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್  ಆಗಿದ್ದಾರೆ.

ಮೈಸೂರು ಜಿಲ್ಲೆಯಲ್ಲಿಂದು ಕೂಡ ಕೊರೊನಾ ಪಾಸಿಟಿವ್ ಹೊಂದಿದವರಿಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ.

ಮೈಸೂರಿನಲ್ಲಿ ಇದುವರೆಗೂ 79,152 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 16,427 ಕ್ಕೆ ಇಳಿಕೆ ಆಗಿದೆ.

ಇಂದು ಸಹ ಸಕ್ರಿಯ ಪ್ರಕರಣಗಳ ಪ್ರಮಾಣದಲ್ಲಿ ಇಳಿಕೆ ಆಗಿದೆ. ಮೈಸೂರಿನಲ್ಲಿಂದು 20 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಮೈಸೂರಿನಲ್ಲಿ ಇದುವರೆಗೆ 1,314 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: