ಮೈಸೂರು

ಪೇಂಟ್ ಮಾಡುವಾಗ ಕೆಳಗೆ ಬಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಸಾವು

ಮೈಸೂರು, ಮೇ.9:- ಆಸ್ಪತ್ರೆ ಯಲ್ಲಿ ಬೆಡ್ ಸಿಗದೆ ನಾನ್ ಕೋವಿಡ್ ವ್ಯಕ್ತಿ ಯೋರ್ವರು ಆಟೋದಲ್ಲೇ ಪ್ರಾಣ ಬಿಟ್ಟ ಘಟನೆ  ಮೈಸೂರಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಕೆ ಆರ್ ನಗರ ತಾಲ್ಲೂಕು ಮಿರ್ಲೆ ಗ್ರಾಮದ ನಿವಾಸಿ ಶ್ರೀಕಾಂತ್ (34) ಎಂಬವರೇ ಮೃತಪಟ್ಟವರಾಗಿದ್ದು ಇವರು ಮನೆಗೆ ಬಣ್ಣ ಹೊಡೆಯುವ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಬೆಳಗೊಳದ ಬಳಿ ಮನೆಗೆ ಬಣ್ಣ ಹೊಡೆಯುವಾಗ ಶ್ರೀಕಾಂತ್ ಏಣಿಯಿಂದ ಜಾರಿ ಕೆಳಗೆ ಬಿದ್ದಿದ್ದರು. ಈ ವೇಳೆ ಕೈ ಸೇರಿ ದೇಹದ ಹಲವು ಭಾಗಗಳಿಗೆ ಗಾಯವಾಗಿತ್ತು ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: