ಪ್ರಮುಖ ಸುದ್ದಿಮೈಸೂರು

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ : ಜೆಎಸ್ ಎಸ್ ಆಸ್ಪತ್ರೆಯಲ್ಲಿ ಹೆಚ್ಚುವರಿ ಬೆಡ್ ಕಲ್ಪಿಸಿಕೊಡುವಂತೆ ಸಚಿವ ಎಸ್.ಟಿ.ಎಸ್.ಮನವಿ

ಮೈಸೂರು,ಮೇ.10:- ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರಿಂದು ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದರು.

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿಯವರ ಬಳಿ ಜೆಎಸ್ ಎಸ್ ಆಸ್ಪತ್ರೆಯಲ್ಲಿ ಹೆಚ್ಚುವರಿ ಬೆಡ್ ಗಳನ್ನು ಕಲ್ಪಿಸಿಕೊಡುವಂತೆ ಮನವಿ ಮಾಡಿದರು. ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕು ಏರಿಕೆಯಾಗುತ್ತಿದ್ದು ಸೋಂಕಿತರಿಗೆ ಬೆಡ್ ಕೊರತೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ    ಸುತ್ತೂರು ಮಠದ ಸಹಕಾರ ಕೋರಿದರು.

ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿಂದು  ಸುತ್ತೂರು   ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ‌ ನೇತೃತ್ವದಲ್ಲಿ ಸಭೆ  ನಡೆಯಿತು. ಮೈಸೂರಿನಲ್ಲಿ ಸೋಂಕಿತರಿಗೆ ಬೆಡ್ ಸಮಸ್ಯೆ ಸೇರಿ ಹಲವು ವಿಚಾರಗಳನ್ನ ಚರ್ಚಿಸಲಾಯಿತು.

ಸಭೆಯಲ್ಲಿ ಸಂಸದ ಪ್ರತಾಪ್‌ಸಿಂಹ, ಶಾಸಕ ನಾಗೇಂದ್ರ, ಅಪರ ಜಿಲ್ಲಾಧಿಕಾರಿ ಮಂಜುನಾಥ್ ಸೇರಿ ಹಲವು ಅಧಿಕಾರಿಗಳು    ಭಾಗಿಯಾಗಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: