ದೇಶಪ್ರಮುಖ ಸುದ್ದಿ

ಬಾಬರಿ ಮಸೀದಿ ಧ್ವಂಸ ಪ್ರಕರಣ ಸ್ವಾತಂತ್ರ್ಯ ಹೋರಾಟಕ್ಕೆಸಮವೆಂದ ಪೇಜಾವರ ಶ್ರೀಗಳು

ಉಡುಪಿ : ಬಾಬರಿ ಮಸೀದಿ ಧ್ವಂಸ ಪ್ರಕರಣವನ್ನು ಕೊಲೆ ಮತ್ತು ಭ್ರಷ್ಟಾಚಾರ ಪ್ರಕರಣಗಳಿಗೆ ಹೋಲಿಸಲಾಗದು. ಇದರಿಂದ ಎಲ್.ಕೆ. ಆಡ್ವಾಣಿ ಅವರು ರಾಷ್ಟ್ರಪತಿ ಹುದ್ದೆಗೇರಲು ಅಡ್ಡಿಯೇನಿಲ್ಲ ಎಂದು ಉಡುಪಿ ಪರ್ಯಾಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಕೇಂದ್ರ ಸಚಿವೆ ಉಮಾ ಭಾರತಿ ಅವರು ರಾಜೀನಾಮೆ ನೀಡುವ ಅಗತ್ಯ ಇಲ್ಲ. ಮಸೀದಿ ದ್ವಂಸ ಪ್ರಕರಣದಲ್ಲಿ ಅಡ್ವಾಣಿ ಮತ್ತು ಉಮಾ ಭಾರತಿ ಅವರ ಪಾತ್ರದ ಬಗ್ಗೆ ಮರು ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ನಿರ್ದೇಶನ ನೀಡಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ ಅಡ್ವಾಣಿ ಅವರು ರಾಷ್ಟ್ರಪತಿ ಹುದ್ದೆಗೇರಲು ಸಹ ಪ್ರಕರಣ ಅಡ್ಡಿಯಾಗದು ಎಂದು ವಿಶ್ವೇಶತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ಭ್ರಷ್ಟಾಚಾರ ಪ್ರಕರಣದ ಆರೋಪಿಗಳಾಗಿದ್ದರೂ ಲಾಲೂ ಪ್ರಸಾದ್ ಯಾದವ್ಕೇಂದ್ರದ ಮಂತ್ರಿಯಾಗಿದ್ದರು ಮತ್ತು ಜಯಲಲಿತಾ ಮುಖ್ಯಮಂತ್ರಿಯಾಗಿದ್ದರು. ಬಾಬರಿ ಮಸೀದಿ ದ್ವಂಸ ಪ್ರಕರಣದಲ್ಲಿ ಅಡ್ವಾಣಿ ಮತ್ತು ಉಮಾ ಭಾರತಿ ಅವರ ವಿರುದ್ಧದ ಆರೋಪಗಳು ಇನ್ನೂ ಸಾಬೀತಾಗಿಲ್ಲ ಎಂದು ಉದಾಹರಣೆ ನೀಡಿದರು.

ರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ಹೋರಾಟ ಪ್ರಕರಣ ಇದಾಗಿರುವುದರಿಂದ ನ್ಯಾಯಾಲಯ ತಪ್ಪಿತಸ್ಥರೆಂದು ತೀರ್ಪು ನೀಡಿದರೂ ಅವರು ಅಪರಾಧಿಗಳಾಗುವುದಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಅನೇಕ ಮಂದಿ ಜೈಲಿಗೆ ಹೋಗಿದ್ದರು, ಅವರನ್ನು ಅಪರಾಧಿಗಳೆನ್ನಲು ಸಾಧ್ಯವಿಲ್ಲ. ಪ್ರಕರಣವೂ ಅದೇ ರೀತಿ ಎಂದು ಬಿಜೆಪಿ ನಾಯಕರನ್ನು ಸಮರ್ಥಿಸಿಕೊಂಡರು.

(ಎನ್.ಬಿ.ಎನ್)

Leave a Reply

comments

Related Articles

error: