ದೇಶಪ್ರಮುಖ ಸುದ್ದಿಮನರಂಜನೆ

ಕೋವಿಡ್ ಸಂಕಷ್ಟ: ಸಿಎಂ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಿದ ನಟರಾದ ಸೂರ್ಯ, ಕಾರ್ತಿ

ಚೆನ್ನೈ,ಮೇ 13-ಕೋವಿಡ್ ವಿರುದ್ಧದ ಹೋರಾಟಕ್ಕೆ ನಟರು, ಸಹೋದರರಾದ ಸೂರ್ಯ ಹಾಗೂ ಕಾರ್ತಿ ಅವರು 1 ಕೋಟಿ ರೂ. ದೇಣಿಗೆಯನ್ನು ನೀಡಿದ್ದಾರೆ.

ತಮಿಳುನಾಡು ನೂತನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರನ್ನು ಭೇಟಿಯಾಗಿ ಸಿಎಂ ಪರಿಹಾರ ನಿಧಿಗೆ ೧ ಕೋಟಿ ರೂ. ದೇಣಿಗೆಯ  ಚೆಕ್ ಅನ್ನು ನೀಡಿದ್ದಾರೆ. ಆ ಮೂಲಕ ಕೋವಿಡ್ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ.

ಕೊರೊನಾ ಎರಡನೇ ಅಲೇಯ ಭೀಕರತೆ ದೇಶವನ್ನು ಬೆಚ್ಚಿಬೀಳಿಸಿದೆ. ಸೋಂಕಿತರು ಸರಿಯಾದ ವೈದ್ಯಕೀಯ ಸೌಲಭ್ಯ ಸಿಗದೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಂಥ ಭೀಕರ ಪರಿಸ್ಥಿತಿಯಲ್ಲಿ ಅನೇಕರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಸಾಕಷ್ಟು ಮಂದಿ ಸೆಲೆಬ್ರಿಟಿಗಳು ಸಹ ಕಷ್ಟದಲ್ಲಿರೊರ ನೆರವಿಗೆ ನಿಂತಿದ್ದಾರೆ.

ಕರ್ನಾಟಕದಲ್ಲೂ ಅನೇಕ ಸಿನಿ ಸೆಲೆಬ್ರಿಟಿಗಳು ಸಹಾಯ ಹಸ್ತ ಚಾಚುತ್ತಿದ್ದಾರೆ. ಕಿಚ್ಚ ಸುದೀಪ್, ಉಪೇಂದ್ರ ಸೇರಿದಂತೆ ಅನೇಕರು ಸಹಾಯ ಮಾಡುತ್ತಿದ್ದಾರೆ. ಉಪೇಂದ್ರ ಅವರು ಸಿನಿಮಾ ಕಾರ್ಮಿಕರ  ಸಹಾಯಕ್ಕೆ ನಿಂತಿದ್ದು, ಅವರಿಗೆ ಅನೇಕರು ಕೈ ಜೋಡಿಸಿದ್ದಾರೆ. ಸಾಧು ಕೋಕಿಲಾ, ಹಿರಿಯ ನಟ ಸರೋಜದೇವಿ, ನಟಿ ಮಾನ್ಯಾ, ಪವನ್ ಒಡೆಯರ್ ಸೇರಿದಂತೆ ಅನೇಕರು ನೆರವು ನೀಡಿದ್ದಾರೆ.

ಇನ್ನು ನಿರ್ದೇಶಕ ಮತ್ತು ಚಿತ್ರಸಾಹಿತಿ ಕವಿರಾಜ್ ತಮ್ಮದೆ ತಂಡ ರಚಿಸಿಕೊಂಡು ಆಕ್ಸಿಜನ್ ಪೂರೈಸುವ ಕೆಲಸಕ್ಕೆ ಮುಂದಾಗಿದ್ದಾರೆ. ಈಗಾಗಲೇ ಎಲ್ಲಾ ತಯಾರಿ ನಡೆಯುತ್ತಿದ್ದು, ಸದ್ಯದಲ್ಲೇ ಕೆಲಸ ಶುರುಮಾಡುವುದಾಗಿ ಕವಿರಾಜ್ ಹೇಳಿದ್ದಾರೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: