ದೇಶಪ್ರಮುಖ ಸುದ್ದಿಮನರಂಜನೆ

`ಅಣ್ಣಾತೆ’ ಸಿನಿಮಾ ಶೂಟಿಂಗ್ ಮುಗಿಸಿ ಚೆನ್ನೈಗೆ ಮರಳಿದ ಸೂಪರ್ ಸ್ಟಾರ್ ರಜನಿಕಾಂತ್

ಚೆನ್ನೈ,ಮೇ 13-ಸೂಪರ್ ಸ್ಟಾರ್ ರಜನಿಕಾಂತ್ ಅವರು `ಅಣ್ಣಾತೆ’ ಸಿನಿಮಾ ಶೂಟಿಂಗ್ ಮುಗಿಸಿ ಚೆನ್ನೈಗೆ ವಾಪಾಸ್ ಆಗಿದ್ದಾರೆ.

ಶೂಟಿಂಗ್ ಮುಗಿಸಿ ಹೈದರಾಬಾದ್ ನಿಂದ ಚೆನ್ನೈಗೆ ಮರಳಿದ ರಜನಿಕಾಂತ್ ಅವರು ನೇರವಾಗಿ ತಮ್ಮ ನಿವಾಸಕ್ಕೆ ತೆರಳಿದರು. ಈ ವೇಳೆ ಪತ್ನಿ ಲತಾ ಅವರು ಆರತಿ ಬೆಳಗಿ ರಜನಿ ಅವರನ್ನು ಬರಮಾಡಿಕೊಂಡರು. ನಂತರ ಮನೆ ಮುಂದೆ ಜಮಾಯಿಸಿದ್ದ ಅಭಿಮಾನಿಗಳತ್ತ ಕೈ ಬೀಸಿದ ರಜನಿಕಾಂತ್ ಒಳಗೆ ನಡೆದರು.

ಕೆಲ ದಿನಗಳಿಂದ ಹೈದರಾಬಾದ್ ನಲ್ಲಿ ನಡೆಯುತ್ತಿದ್ದ ಶೂಟಿಂಗ್ ಮುಗಿಸಿ ಚೆನ್ನೈ ಬರುವ ಮುನ್ನ ರಜನಿ ಅವರು ನಟ ಮೋಹನ್ ಬಾಬು ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಮೋಹನ್ ಬಾಬು ಮತ್ತು ಮಗಳು ಲಕ್ಷ್ಮಿ ಮಂಚು ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಕಳೆದ ಡಿಸೆಂಬರ್ ತಿಂಗಳಲ್ಲಿ ಅಣ್ಣಾತೆ ಚಿತ್ರೀಕರಣ ನಡೆಯುತ್ತಿದ್ದ ಸಂದರ್ಭದಲ್ಲಿ ಇಬ್ಬರು ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿತ್ತು. ಹಾಗಾಗಿ ಶೂಟಿಂಗ್ ಅನ್ನು ರದ್ದುಗೊಳಿಸಲಾಗಿತ್ತು. ಈ ವೇಳೆ ಅನಾರೋಗ್ಯಕ್ಕೀಡಾಗಿದ್ದ ರಜನಿ ಅವರು ಹೈದರಾಬಾದ್ ನ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದುಕೊಂಡಿದ್ದರು. ಬಳಿಕ ಮನೆಗೆ ವಾಪಾಸ್ ಆಗಿದ್ದರು. ಇದೀಗ ರಜನಿ ಅವರು ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. (ಏಜೆನ್ಸೀಸ್, ಎಂ.ಎನ್)

 

Leave a Reply

comments

Related Articles

error: