ದೇಶಪ್ರಮುಖ ಸುದ್ದಿ

ಜೂನ್ 27 ರಂದು ನಿಗದಿಯಾಗಿದ್ದ ಯುಪಿಎಸ್ ಸಿ ನಾಗರಿಕ ಸೇವೆಗಳ ಪರೀಕ್ಷೆ ಮುಂದೂಡಿಕೆ

ದೇಶ(ನವದೆಹಲಿ)ಮೇ.14 :-ಜೂನ್ 27 ರಂದು ನಿಗದಿಯಾಗಿದ್ದ ನಾಗರಿಕ ಸೇವೆಗಳ ಪ್ರಿಲಿಮಿನರಿ ಪರೀಕ್ಷೆಯನ್ನು ಕೊರೋನಾ ವೈರಸ್ ಸಾಂಕ್ರಾಮಿಕ ಹೆಚ್ಚಳದ ಹಿನ್ನೆಲೆಯಲ್ಲಿ ಕೇಂದ್ರ ಲೋಕಸೇವಾ ಆಯೋಗ ಮುಂದೂಡಿದೆ. ಅಕ್ಟೋಬರ್ 10 ರಂದು ಪರೀಕ್ಷೆ ನಡೆಸುವುದಾಗಿ ಆಯೋಗ ತಿಳಿಸಿದೆ.

ಭಾರತೀಯ ನಾಗರಿಕ ಸೇನೆ (ಐಎಎಸ್) ಭಾರತೀಯ ವಿದೇಶಾಂಗ ಸೇವೆ (ಐಎಫ್ ಎಸ್) ಭಾರತೀಯ ಪೊಲೀಸ್ ಸೇವೆ (ಐಎಫ್ಎಸ್) ಮತ್ತಿತರ ಅಧಿಕಾರಿಗಳ ಆಯ್ಕೆಗಾಗಿ ಪ್ರತಿವರ್ಷ ಪ್ರಿಲಿಮಿನರಿ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನವನ್ನು ಯುಪಿಎಸ್ ಸಿ ನಡೆಸುತ್ತದೆ.

ಆದರೆ, ಈ ಬಾರಿ ಕೊರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 27 ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಅಕ್ಟೋಬರ್ 10 ರಂದು ಪ್ರಿಲಿಮಿನರಿ ಪರೀಕ್ಷೆ ನಡೆಸಲಾಗುವುದು ಎಂದು ಯುಪಿಎಸ್ ಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: