ದೇಶಪ್ರಮುಖ ಸುದ್ದಿ

ಕೋವಿಡ್-19: ಭಾರತದಲ್ಲಿ 3.43 ಲಕ್ಷ ಮಂದಿಯಲ್ಲಿ ಸೋಂಕು ದೃಢ; 4 ಸಾವಿರ ಮಂದಿ ಸಾವು

ನವದೆಹಲಿ,ಮೇ 14- ಭಾರತದಲ್ಲಿ ಕೊರೋನಾ 2ನೇ ಅಲೆಯ ಆರ್ಭಟ ಮುಂದುವರೆದಿದ್ದು, ನಿನ್ನೆ ಒಂದೇ ದಿನ ಭಾರತದಲ್ಲಿ 3,43,144 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,40,46,809ಕ್ಕೆ ಏರಿಕೆಯಾಗಿದೆ.

ಅಲ್ಲದೆ, 4 ಸಾವಿರ ಮಂದಿ ಮೃತಪಟ್ಟಿದ್ದು, ಸಾವಿಗೀಡಾದವರ ಸಂಖ್ಯೆ 2,62,317ಕ್ಕೆ ತಲುಪಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 37,04,893ಕ್ಕೆ ಏರಿಕೆಯಾಗಿದೆ.

ಈ ಮಧ್ಯೆ 3,44,776 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,00,79,599ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 18,75,515 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 31,13,24,100 30,75,83,991 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಈ ನಡುವೆ ಕೇಂದ್ರ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 17,92,98,584 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: