
ಪ್ರಮುಖ ಸುದ್ದಿಮನರಂಜನೆ
ನಟಿ ಸಂಜನಾ ಗಲ್ರಾನಿಗೆ ಎದುರಾಗಿದೆ ಮತ್ತೊಂದು ಕಂಟಕ
ರಾಜ್ಯ( ಬೆಂಗಳೂರು)ಮೇ.15:- ಡ್ರಗ್ ಪ್ರಕರಣದಲ್ಲಿ ಸಿಲುಕಿ ಜಾಮೀನಿನ ಮೇಲೆ ಹೊರಬಂದಿರುವ ನಟಿ ಸಂಜನಾ ಗಲ್ರಾನಿ ವಿರುದ್ಧ ಮತ್ತೊಂದು ಕಂಟಕ ಎದುರಾಗಿದೆ.
2019ರಲ್ಲಿ ಕ್ಲಬ್ ಒಂದರಲ್ಲಿ ನಡೆದ ಗಲಾಟೆಯಲ್ಲಿ ವಂದನಾ ಜೈನ್ ಮೇಲೆ ಸಂಜನಾ ಹಲ್ಲೆ ನಡೆಸಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಅವರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಡ್ರಗ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಅನಾರೋಗ್ಯಕ್ಕೀಡಾಗಿದ್ದ ಸಂಜನಾ ಚೇತರಿಸಿಕೊಂಡು ಕೊರೋನಾದಿಂದ ಸಂಕಷ್ಟಕ್ಕೀಡಾದವರಿಗೆ ಊಟ ವಿತರಿಸುವ ಕೆಲಸ ಮಾಡುತ್ತಿದ್ದಾರೆ. ಇದರ ನಡುವೆ ಹಳೇ ಪ್ರಕರಣದಲ್ಲಿ ಸಿಲುಕಿದ್ದಾರೆ.