ಕರ್ನಾಟಕಪ್ರಮುಖ ಸುದ್ದಿ

ಮತ್ತೆ ಆಸ್ಪತ್ರೆಗೆ ದಾಖಲಾದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ

ರಾಜ್ಯ(ಬೆಂಗಳೂರು)ಮೇ.18:-   ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್.ದೊರೆಸ್ವಾಮಿ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಸ್ವಸ್ಥತೆ, ನಿಶ್ಯಕ್ತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್‌ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.

ಕೋವಿಡ್‌ನಿಂದ ಗುಣಮುಖರಾಗಿ ದೊರೆಸ್ವಾಮಿ ಅವರು ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: