ಕರ್ನಾಟಕ

ರಂಭಾಪುರಿ ಪೀಠ ನಮ್ಮ ಸಂಸ್ಕೃತಿಯನ್ನು ರಕ್ಷಿಸುತ್ತಿದೆ : ಯಡಿಯೂರಪ್ಪ

ಬೆಂಗಳೂರಿನಲ್ಲಿ ಭಾನುವಾರ ನಡೆದ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಮತ್ತು ಶ್ರೀಮದ್ ರಂಭಾಪುರಿ ವೀರಸೋಮೇಶ್ವರ ಜಗದ್ಗುರುಗಳವರ ಪೀಠಾರೋಹಣದ ರಜತಮಹೋತ್ಸವದ ಪ್ರಯುಕ್ತ ಗುರುವಂದನಾ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್. ಯಡಿಯೂರಪ್ಪ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಜಗದ್ಗುರು ರೇಣುಕಾಚಾರ್ಯರ ಧರ್ಮ ಸೂತ್ರಗಳನ್ನು ಪರಿಪಾಲಿಸುತ್ತಿರುವ ರಂಭಾಪುರಿ ಪೀಠ ನಮ್ಮ ಸಂಸ್ಕೃತಿ ಪರಂಪರೆಗಳನ್ನು ರಕ್ಷಿಸುತ್ತಿದೆ ಎಂದು ನುಡಿದರು. ಪ್ರಸ್ತುತ ಗುರುಗಳಾದ ಶ್ರೀ ಮದ್ ರಂಭಾಪುರಿ ವೀರಸೋಮೇಶ್ವರ ಜಗದ್ಗುರುಗಳು ಸಮಾಜದ ಕತ್ತಲನ್ನು ಸರಿಸಿ ಬೆಳಕು ನೀಡುವ ಕಾಯಕದಲ್ಲಿ ನಿರತರಾಗಿದ್ದಾರೆ ಎಂದು ತಮ್ಮ ನುಡಿನಮನಗಳನ್ನು ಸಲ್ಲಿಸಿದರು.

(ಎನ್.ಬಿ.ಎನ್)

Leave a Reply

comments

Related Articles

error: