ದೇಶಪ್ರಮುಖ ಸುದ್ದಿ

ಕಾವೇರಿ ನಿರ್ವಹಣಾ ಮಂಡಳಿಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆ ಕೈಬಿಟ್ಟ ತಮಿಳುನಾಡು ರೈತರು

ನವದೆಹಲಿ : ಕಳೆದ 41 ದಿನಗಳಿಂದ ದೆಹಲಿಯಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ತಮಿಳುನಾಡು ರೈತರು ತಾತ್ಕಾಲಿಕವಾಗಿ ಹಿಂಪಡೆದುಕೊಂಡಿದ್ದಾರೆ. ಬರ ಪರಿಹಾರ ನೀಡುವಂತೆ ಆಗ್ರಹಿಸಿ ಮೃತ ರೈತರ ತಲೆಬುರುಡೆಗಳ ಮಾಲೆ ಸುತ್ತಿಕೊಂಡು ಪ್ರತಿಭಟನೆ ನಡೆಸುತ್ತಿದ್ದ ತಮಿಳುನಾಡು ರೈತರು ಇಡೀ ದೇಶದ ಗಮನ ಸೆಳೆದಿದ್ದರು.

ರೂ.40 ಸಾವಿರ ಕೋಟಿ ಬರ ಪರಿಹಾರ, ರೈತರ ಸಾಲ ಮನ್ನಾ, ಕಾವೇರಿ ನದಿ ನಿರ್ವಹಣಾ ಮಂಡಳಿ ರಚನೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಇಟ್ಟುಕೊಂಡು ವಿಶಿಷ್ಟ ಹೋರಾಟ ನಡೆಸಿದ್ದ ರೈತರು ಕೊನೆಗೂ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿಯವರ ಭರವಸೆಗೆ ಮಣಿದಿದ್ದು, ಮೇ.25 ರವರೆಗೆ ಹೋರಾಟ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.

ದೆಹಲಿಯ ಜಂತರ್’ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭೇಟಿ ಮಾಡಿದ ತಮಿಳುನಾಡು ಸಿಎಂ ಕೆ. ಪಳನಿಸ್ವಾಮಿಯವರು, ಪ್ರಧಾನಿ ಮೋದಿಯವರ ಜೊತೆ ಈ ಬಗ್ಗೆ ಮಾತನಾಡುವ ಭರವಸೆ ನೀಡಿ ಹೋರಾಟ ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದರು. ಈ ಕಾರಣದಿಂದ ರೈತ ಮುಖಂಡ ಅಯ್ಯಕ್ಕಣ್ಣು ಸಂಜೆ ಸುದ್ದಿಗೋಷ್ಠಿಯಲ್ಲಿ ಹೋರಾಟ ಅಮಾನತುಗೊಳಿಸುವ ಘೋಷಣೆ ಮಾಡಿದರು. “ಮುಖ್ಯಮಂತ್ರಿಗಳು ಭರವಸೆ ನೀಡಿದ ಕಾರಣ ತಿಂಗಳ ಮಟ್ಟಿಗೆ ಹೋರಾಟವನ್ನು ನಿಲ್ಲಿಸಲಿದ್ದೇವೆ. ಒಂದು ವೇಳೆ ಬೇಡಿಕೆ ಈಡೇರಿಸದೇ ಇದ್ದರೆ ಮೇ.25 ರಿಂದ ಮತ್ತೆ ಇದೇ ಸ್ಥಳದಲ್ಲಿ ಪ್ರತಿಭಟನೆ ಆರಂಭಿಸುತ್ತೇವೆ ಎಂದು ಎಚ್ಚರಿಸಿದರು.

(ಎನ್.ಬಿ.ಎನ್)

Leave a Reply

comments

Related Articles

error: