ದೇಶಪ್ರಮುಖ ಸುದ್ದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: 13 ನಕ್ಸಲೀಯರ ಹತ್ಯೆ

ಭುವನೇಶ್ವರ/ಗಡ್ಚಿರೊಲಿ,ಮೇ 21-ಪೊಲೀಸರು ನಡೆಸಿದ ಭಾರೀ ಕಾರ್ಯಾಚರಣೆಯಲ್ಲಿ 13 ಮಂದಿ ನಕ್ಸಲ್ ರನ್ನು ಹತ್ಯೆಗೈಯಲಾಗಿದೆ.

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ಇಂದು ನಸುಕಿನ ಜಾವ ಸಿ-60 ಕಮಾಂಡೊ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 13 ಮಂದಿ ನಕ್ಸಲರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆ ಸ್ಥಳದಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುತ್ತಲಿನ ಪ್ರದೇಶದಲ್ಲಿ ಶೋಧಕಾರ್ಯ ಮುಂದುವರೆದಿದೆ.

ಪೊಲೀಸರು ಮತ್ತು ನಕ್ಸಲೀಯರ ಮಧ್ಯೆ ಭಾರೀ ಗುಂಡಿನ ಚಕಮಕಿ ನಡೆಯಿತು. ಈ ವೇಳೆ 13 ಮಂದಿ ನಕ್ಸಲರು ಮೃತಪಟ್ಟಿದ್ದಾರೆ ಎಂದು ಗಡ್ಚೊಲಿ ಜಿಲ್ಲೆಯ ಡಿಐಜಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: