ಕರ್ನಾಟಕಪ್ರಮುಖ ಸುದ್ದಿ

ಪ್ರಿಯಾ ಕೃಷ್ಣ ಫ್ಲೆಕ್ಸ್’ಗೆ ಮಸಿ ಹರಿದು ಹಾಕಿದ ದುಷ್ಕರ್ಮಿಗಳು : ರಾಜಕೀಯ ವಿರೋಧಿಗಳ ಕೃತ್ಯ ಶಂಕೆ

ಬೆಂಗಳೂರಿನ ಗೋವಿಂದ ರಾಜನಗರ ಕ್ಷೇತ್ರದ ಶಾಸಕ ಪ್ರಿಯಾ ಕೃಷ್ಣ ಬೆಂಬಲಿಗರು ಹಾಕಿದ್ದ ಬ್ಯಾನರ್ ಕಟೌಟ್ ಗಳನ್ನು ಕೆಲ ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ನಡೆದಿದೆ.

ಮಾಜಿ ಸಚಿವ ಎಂ.ಕೃಷ್ಣಪ್ಪ ಅವರ ಪುತ್ರರಾಗಿರುವ ಪ್ರಿಯಾ ಕೃಷ್ಣ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಫ್ಲೆಕ್ಸ್ ಬ್ಯಾನರ್ ಗಳನ್ನು ಹಾಕಲಾಗಿತ್ತು.

ಕೆಲವು ಫ್ಲೆಕ್ಸ್ ಗಳಿಗೆ ಮಸಿ ಎರಚಿದ್ದು, ಕೆಲವು ಫ್ಲೆಕ್ಸ್ ಗಳನ್ನು ಹರಿದು ಹಾಕಲಾಗಿದೆ.

ನಿನ್ನೆ ರಾತ್ರಿ ನಡೆದಿರೋ ಘಟನೆ ನಡೆದಿದ್ದು, ಸ್ಥಳೀಯ ಬಿಜೆಪಿ ನಾಯಕರು ಈ ಕೃತ್ಯ ಎಸಗಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ ರಾಜಕೀಯ ಘರ್ಷಣೆ ಪ್ರಾರಂಭವಾಗಿದೆ ಎಂದೇ ಹೇಳಲಾಗುತ್ತಿದ್ದು, ಮುಂದಿನ ಚುನಾವಣೆಗೆ ವ್ಯಾಪಕ ಭದ್ರತೆ ಕೈಗೊಳ್ಳುವ ಅಗತ್ಯವಿದೆ ಎಂಬುದು ಸಾಮಾನ್ಯ ಜನರ ಅಭಿಪ್ರಾಯವಾಗಿದೆ.

(ಎನ್.ಬಿ.ಎನ್)

Leave a Reply

comments

Related Articles

error: