ಪ್ರಮುಖ ಸುದ್ದಿಮೈಸೂರು

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ : ಸಚಿವ ಮುರುಗೇಶ್ ನಿರಾಣಿ ಸ್ಪಷ್ಟನೆ

ಮೈಸೂರು,ಮೇ.23:- ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂಬುದನ್ನು ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿಂದು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ   ಪ್ರತಿಕ್ರಿಯೆ ನೀಡಿದ ಅವರು ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಸಿಎಂ ಆಗಿರ್ತಾರೆ ಎಂದು   ಹೇಳಿದ್ದಾರೆ. ರಾಜ್ಯದಲ್ಲಿ ಯಡಿಯೂರಪ್ಪನವರ ಆಡಳಿತ ಉತ್ತಮವಾಗಿದೆ. ಕೊರೊನಾ ಸಂದರ್ಭದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ. ನಾಯಕತ್ವ ಬದಲಾವಣೆ ಕೇವಲ ಊಹಾಪೋಹ ಅಷ್ಟೇ ಎಂದು ಸಚಿವರು ತಿಳಿಸಿದ್ದಾರೆ.

ಮುಂದಿನ ಚುನಾವಣೆಯೂ ಕೂಡಾ ಯಡಿಯೂಯಡಿಯೂರಪ್ಪನವರ ನೇತೃತ್ವದಲ್ಲೇ ನಡೆಯಲಿದೆ ಎಂದು ಮುರುಗೇಶ್ ನಿರಾಣಿ ಸ್ಪಷ್ಟ ಪಡಿಸಿದ್ದಾರೆ.

ರಾಜ್ಯದಲ್ಲಿಆಕ್ಸಿಜನ್ಕೊರತೆ ಇಲ್ಲ. ನಮ್ಮಲ್ಲಿಸಾಕಷ್ಟುಪ್ರಮಾಣದಲ್ಲಿಆಕ್ಸಿಜನ್ಇದೆ. ಆದರೆ ಅದನ್ನು ಶೇಖರಣೆ ಮಾಡಲು ಕಂಟೇನರ್ಗಳ ಕೊರತೆ ಇದೆ ಎಂದು  ಹೇಳಿದರು.

ಸಾಕಷ್ಟು ಪ್ರಮಾಣದಲ್ಲಿ ಆಕ್ಸಿಜನ್ ಉತ್ಪಾದನೆ ಆಗ್ತಿದೆ. ಕೇಂದ್ರದಿಂದಲೂ ಆಕ್ಸಿಜನ್ ಪೂರೈಕೆ ಆಗ್ತಿದೆ. ಕಂಟೇನರ್ ಗಳ ಕೊರತೆಯಿಂದ ಸಮಸ್ಯೆಯಾಗುತ್ತಿದೆ ಎಂದು ಸ್ಪಷ್ಟನೆ ನೀಡಿದರು.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: