ಕ್ರೀಡೆದೇಶಪ್ರಮುಖ ಸುದ್ದಿ

ಕೋವಿಡ್ ಸಂಕಷ್ಟ: ನೆರವಿಗೆ ಧಾವಿಸಿದ ಹಾರ್ದಿಕ್, ಕೃಣಾಲ್ ಪಾಂಡ್ಯಾ

ವಡೋದರ,ಮೇ 24-ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಟೀಂ ಇಂಡಿಯಾದ ಆಟಗಾರರಾದ ಹಾರ್ದಿಕ್ ಮತ್ತು ಕೃಣಾಲ್ ಪಾಂಡ್ಯಾ ನೆರವಿಗೆ ಧಾವಿಸಿದ್ದಾರೆ.

ಬಿಕ್ಕಟ್ಟು ಸೃಷ್ಟಿಯಾಗಿರುವ ಕೋವಿಡ್ ಆರೈಕೆ ಕೇಂದ್ರಗಳಿಗೆ ಆಮ್ಲಜನಕ ಸಾಂದ್ರಕ(ಆಕ್ಸಿಜನ್‌ ಕಾನ್ಸನ್‌ಟ್ರೇಟರ್‌)ಗಳನ್ನು ರವಾನಿಸುವ ಕೆಲಸ ಆರಂಭಿಸಿದ್ದಾರೆ. ಈ ಬಗ್ಗೆ ಕೃಣಾಲ್ ಪಾಂಡ್ಯಾ, ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ನಮ್ಮ ಹೃದಯದ ಪ್ರಾರ್ಥನೆಯೊಂದಿಗೆ ಈ ಹೊಸ ಬ್ಯಾಚ್ ಆಕ್ಸಿಜನ್ ಕಾನ್ಸನ್‌ಟ್ರೇಟರ್‌ಗಳನ್ನು ರೋಗಿಗಳ ತ್ವರಿತ ಚೇತರಿಕೆಗಾಗಿ ಕೋವಿಡ್ ಕೇಂದ್ರಗಳಿಗೆ ರವಾನಿಸುತ್ತಿದ್ದೇವೆ ಕೃಣಾಲ್ ಪಾಂಡ್ಯಾ ಟ್ವೀಟ್ ಮಾಡಿದ್ದಾರೆ.

ನಾವು ಒಂದು ಕಠಿಣ ಯುದ್ಧದ ನಡುದಾರಿಯಲ್ಲಿದ್ದೇವೆ. ಒಟ್ಟಾಗಿ ಕೆಲಸ ಮಾಡುವ ಮೂಲಕ ಈ ಯುದ್ಧವನ್ನು ಗೆಲ್ಲಬಹುದು ಎಂದು ಹಾರ್ದಿಕ್ ಪಾಂಡ್ಯಾ ಟ್ವೀಟ್ ಮಾಡಿದ್ದಾರೆ.

ತೀವ್ರವಾಗಿ ಹರಡುತ್ತಿರುವ ಸಾಂಕ್ರಾಮಿಕ ರೋಗದ ವಿರುದ್ಧದ ದೇಶದ ಹೋರಾಟದಲ್ಲಿ ಗ್ರಾಮೀಣ ಪ್ರದೇಶಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಸಹೋದರ ಕೃಣಾಲ್ ಸೇರಿ ತಮ್ಮ ಇಡೀ ಕುಟುಂಬವು 200 ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳನ್ನು ದಾನ ಮಾಡುವುದಾಗಿ ಈ ತಿಂಗಳ ಆರಂಭದಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಘೋಷಿಸಿದ್ದರು. ಅದರಂತೆ ಈಗ ನೆರವಿನ ಹಸ್ತ ಚಾಚಿದ್ದಾರೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: