ದೇಶಪ್ರಮುಖ ಸುದ್ದಿ

ಅಕ್ರಮ ಗೋಸಾಗಾಟ ತಡೆಗೆ ಆಧಾರ್ ಗುರುತು ಪತ್ರ ನೀಡಲು ಪ್ರಸ್ತಾವನೆ

ನವದೆಹಲಿ: ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ದನಗಳ ರಕ್ಷಣೆ ಮತ್ತು ಅಕ್ರಮ ಸಾಗಾಟವನ್ನು ತಪ್ಪಿಸಲು ಆಧಾರ್ ನಂತಹ ಗುರುತು ಪತ್ರವನ್ನು ನೀಡುವ ಅಗತ್ಯವಿದೆ ಎಂದು ಪ್ರಸ್ತಾವನೆ ಸಲ್ಲಿಸಿದೆ.

ಕೇಂದ್ರ ಸರ್ಕಾರ ಭಾರತ- ಬಾಂಗ್ಲಾದೇಶ ಗಡಿಯಲ್ಲಿ ಹಸುವಿನ ರಕ್ಷಣೆ ಮತ್ತು ಜಾನುವಾರು ಕಳ್ಳ ಸಾಗಾಣಿಗೆ ತಡೆಯುವ ಸಂಬಂಧ ಸೋಮವಾರ ವರದಿ ಸಲ್ಲಿಸಿದೆ. ದನಗಳಿಗೂ ಆಧಾರ್ ಕಾರ್ಡ್ ನೀಡುವಂತೆ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿಯನ್ನು ಒಳಗೊಂಡ ಸಮಿತಿ ಶಿಫಾರಸು ಮಾಡಿದೆ ಎಂದು ತಿಳಿಸಿದೆ. ಈ ಕಾರ್ಡ್ ನಿಂದಾಗಿ ದನಗಳನ್ನು ಪತ್ತೆ ಮಾಡಲು ಸಹಕಾರಿಯಾಗಲಿದ್ದು, ಕಳ್ಳ ಸಾಗಾಣಿಕೆಯನ್ನು ತಡೆಯಬಹುದು ಎಂದು ಕೇಂದ್ರ ತಿಳಿಸಿದೆ. ಈ ಆಧಾರ್ ಕಾರ್ಡ್ ನಲ್ಲಿ ದನದ ವಯಸ್ಸು, ತಳಿ, ಲಿಂಗ, ಸ್ಥಳ, ಎತ್ತರ, ದೇಹ, ಬಣ್ಣ, ಕೊಂಬುವಿನ ಮಾಹಿತಿ ಇರಲಿದೆಯಂತೆ. ದನಗಳಿಗೆ ಆಧಾರ್ ನೀಡಬೇಕೆಂಬ ಪ್ರಸ್ತಾಪ ಕಳೆದ ವರ್ಷವೇ ಚರ್ಚೆಯಲ್ಲಿತ್ತಾದರೂ ಪ್ರಸ್ತಾಪಕ್ಕೆ ಕೆಲ ವಿರೋಧಗಳು ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರಲಿಲ್ಲ. ಆದರೆ ಈಗ ಕೇಂದ್ರ ಸರ್ಕಾರ ದನಗಳಿಗೆ ಆಧಾರ್ ನೀಡುವ ಬಗ್ಗೆ ಸುಪ್ರೀಂಗೆ ವರದಿ ಸಲ್ಲಿಸಿದೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: