ಕರ್ನಾಟಕಪ್ರಮುಖ ಸುದ್ದಿ

ಕೊಡಗು ಜಿಲ್ಲೆಯಲ್ಲಿ ಮಂಗಳವಾರ 224 ಹೊಸ ಕೋವಿಡ್-19 ಪ್ರಕರಣ

ರಾಜ್ಯ(ಮಡಿಕೇರಿ) ಮೇ 26:- ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆ ವೇಳೆಗೆ 224 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 177 ಆರ್‍ಟಿಪಿಸಿಆರ್ ಮತ್ತು 47 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 59 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 56 ಪ್ರಕರಣಗಳು ಆರ್‍ಟಿಪಿಸಿಆರ್ ಮತ್ತು 3 ಪ್ರಕರಣಗಳು ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 116 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 80 ಆರ್‍ಟಿಪಿಸಿಆರ್ ಮತ್ತು 36 ಪ್ರಕರಣಗಳು ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 49 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 41 ಆರ್‍ಟಿಪಿಸಿಆರ್ ಮತ್ತು 8 ಪ್ರಕರಣಗಳು ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 22,956 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 334 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 20,095 ಮಂದಿ ಗುಣಮುಖರಾಗಿದ್ದಾರೆ. 2563 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 3 ಸಾವು ಉಂಟಾಗಿದ್ದು, ಒಟ್ಟು 298 ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 382 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: