ಕರ್ನಾಟಕದೇಶಪ್ರಮುಖ ಸುದ್ದಿ

ಕರ್ನಾಟಕಕ್ಕೆ ಮತ್ತೆ ರಾಷ್ಟ್ರೀಯ ಇ-ಗವರ್ನೆನ್ಸ್ ಅವಾರ್ಡ್: ಸಚಿವ ಎಚ್.ಕೆ.ಪಾಟೀಲ್ ಸ್ವೀಕಾರ

ಲಖ್ನೋ: ಮಾಹಿತಿ ಮತ್ತು ಸಂವಹನ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಾಧನಗೈದಿರುವ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಮತ್ತೆ “ರಾಷ್ಟ್ರೀಯ ಇ-ಆಡಳಿತ ಪುರಸ್ಕಾರ” ಲಭ್ಯವಾಗಿದೆ.

“ರಾಷ್ಟ್ರೀಯ ಪಂಚಾಯತ್ ರಾಜ್ ದಿನ”ದ ಅಂಗವಾಗಿ ಉತ್ತರ ಪ್ರದೇಶದ ರಾಜಧಾನಿ ಲಖ್ನೋದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಇದಕ್ಕೂ ಮೊದಲು ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್ ಅವರು, ರಾಜ್ಯ ಸರ್ಕಾರವು ಎಲ್ಲ ಅಭಿವೃದ್ಧಿ ಯೋಜನೆಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಸಲುವಾಗಿ “ಗಾಂಧಿ ಸಾಕ್ಷಿ ಕಾಯಕ” ಎಂಬ ಸಾಫ್ಟ್’ವೇರ್ ಅನ್ನು ಅಭಿವೃದ್ಧಿಪಡಿಸಿ ಅಳವಡಿಸಿದೆ. ರಾಜ್ಯ ಸರ್ಕಾರವು ಪ್ರತಿ ಸರ್ಕಾರಿ ಯೋಜನೆಗೂ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ (ಐಸಿಟಿ) ಅಪ್ಲಿಕೇಷನ್’ಗಳನ್ನು ಅಭಿವೃದ್ಧಿಪಡಿಸಿ ಅಳವಡಿಸುತ್ತಿದೆ. ಇದಕ್ಕಾಗಿ ಕೇಂದ್ರ ಸರ್ಕಾರವು ಕರ್ನಾಟಕವನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಿದೆ ಎಂದು ಹೇಳಿದ್ದಾರೆ.

ರಾಜ್ಯ ಮಟ್ಟದ ಪ್ರಶಸ್ತಿಗಳಲ್ಲಿ ಕರ್ನಾಟಕದ ಕೊಡಗು ಜಿಲ್ಲಾ ಪಂಚಾಯಿತಿ, ಪುತ್ತೂರು ಮತ್ತು ಸಾಗರ ತಾಲೂಕು ಪಂಚಾಯಿತಿಗಳು ಮತ್ತು ತೀರ್ಥಹಳ್ಳಿ ತಾಲೂಕಿನ ಮಲ್ಲಿಗೆ ಗ್ರಾಮ ಪಂಚಾಯಿತಿಯು ಇ-ಆಡಳಿತ ಪ್ರಶಸ್ತಿಗೆ ಪಡೆದಿವೆ.

(ಎನ್.ಬಿ.ಎನ್)

Leave a Reply

comments

Related Articles

error: