
ಸುದ್ದಿ ಸಂಕ್ಷಿಪ್ತ
ಸಹಾಯಧನ ಪಡೆಯಲು ಕಲಾವಿದರಿಂದ ಅರ್ಜಿ ಆಹ್ವಾನ
ರಾಜ್ಯ(ಮಡಿಕೇರಿ) ಮೇ 27:- ಕೊರೊನಾ ಎರಡನೇ ಅಲೆಯನ್ನು ತಡೆಯಲು ಜಾರಿ ಮಾಡಿರುವ ಲಾಕ್ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿ ಕಷ್ಟ ಪರಿಸ್ಥಿತಿಯಲ್ಲಿರುವ ಜಿಲ್ಲೆಯ ಕಲಾವಿದರಿಗೆ ಸಹಾಯಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಲ್ಲಿಸುವ ಕಲಾವಿದರು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ‘ಸೇವಾ ಸಿಂಧು’ ಮೂಲಕವೇ ಸಲ್ಲಿಸಬೇಕು. ಆರ್ಥಿಕ ಸಂಕಷ್ಟದಲ್ಲಿರುವ ಎಲ್ಲಾ ಕಲಾಪ್ರಕಾರದ ಕಲಾವಿದರನ್ನು ಪರಿಗಣಿಸುವುದು, ವೃತ್ತಿನಿರತ ಕಲಾವಿದರಾಗಿದ್ದು, ಅರ್ಥಿಕವಾಗಿ ಸಂಕಷ್ಟದಲ್ಲಿ ಇರಬೇಕು. ಸೇವಾ ಸಿಂಧುವಿನಲ್ಲಿ ಸಲ್ಲಿಸಿದ ಅರ್ಜಿಯ ಜೇಷ್ಠತೆ ಅರ್ಜಿ ಸಲ್ಲಿಸಿದ ಕ್ಷಣದಿಂದಲೇ ಗಣಕೆಯಾಗುತ್ತದೆ. ಮೊದಲು ಅರ್ಜಿ ಸಲ್ಲಿಸಿದ ಕಲಾವಿದರಿಗೆ ಮೊದಲ ಆದ್ಯತೆ ನೀಡಲಾಗುವುದು. ಕಲಾವಿದರು ಅರ್ಜಿಯಲ್ಲಿ ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ (ಮೊಬೈಲ್ ಸಂಖ್ಯೆ) ಕಲಾಸೇವೆ, ಕಲಾಪ್ರಕಾರ, ಆಧಾರ್ ಸಂಖ್ಯೆ, ಬ್ಯಾಂಕ್ ವಿವರಗಳನ್ನು ಸ್ಪಷ್ಟವಾಗಿ ನಮೂದಿಸಬೇಕು ಹಾಗೂ ಕೋರಿರುವ ದಾಖಲೆಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕು.
ಕೋವಿಡ್-19 ರ 2 ನೇ ಅಲೆಯ ಅವಧಿಯಲ್ಲಿ ಆರ್ಥಿಕವಾಗಿ ತೊಂದರೆಯಲ್ಲಿರುವ ಕಲಾವಿದರಿಗೆ ಒಂದು ಸಲ ಮಾತ್ರ 3 ಸಾವಿರ ರೂ ನೀಡಲಾಗುವುದು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರುವವರು ಇದಕ್ಕೆ ಆರ್ಹರಿರುವುದಿಲ್ಲ. ಸರ್ಕಾರಿ ನೌಕರರಾಗಿರಬಾರದು (ರಾಜ್ಯ/ ಕೇಂದ್ರ/ ನಿಗಮ ಮಂಡಳಿ/ಸರ್ಕಾರಿ ಅನುದಾನಿತ ಸಂಸ್ಥೆಗಳು/ ಅರೆ ಸರ್ಕಾರಿ ಸಂಸ್ಥೆಗಳು), ಅರ್ಜಿಯ ಜೊತೆಗೆ ಆಧಾರ್ ಕಾರ್ಡ್ ತಮ್ಮ ಕಲಾಸೇವೆ ಸಲ್ಲಿಸಿರುವ ಕನಿಷ್ಠ ಒಂದು ಫೋಟೋ, ಬ್ಯಾಂಕ್ ಪಾಸ್ ಪುಸ್ತಕದ ಮೊದಲ ಪುಟದ ಪೋಟೋ ಕಡ್ಡಾಯವಾಗಿ ಲಗತ್ತಿಸುವುದು. ಅರ್ಜಿದಾರರು ಕನಿಷ್ಠ 35 ವರ್ಷ ಮೇಲ್ಪಟ್ಟವರಾಗಿರಬೇಕು. ಕಲಾಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಸೇವೆ ಸಲ್ಲಿಸಿದವರಾಗಿರಬೇಕು.
ಈ ಷರತ್ತುಗಳನ್ನು ಒಳಗೊಂಡಂತೆ ಸೇವಾ ಸಿಂಧು ಮೂಲಕ ಅರ್ಜಿಯನ್ನು ಸಲ್ಲಿಸಲು ಹಾಗೂ ಅರ್ಜಿಯ ಪ್ರತಿಯೊಂದಿಗೆ ಪೂರಕ ದಾಖಲೆಗಳನ್ನು ಜೂನ್ 07 ರೊಳಗಾಗಿ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ಮಡಿಕೇರಿ ಇಲ್ಲಿ ಕಚೇರಿ ವೇಳೆಯಲ್ಲಿ ಮೊಬೈಲ್ ಸಂಖ್ಯೆ 9449699780 ನ್ನು ಸಂಪರ್ಕಿಸಬಹುದಾಗಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ ಅವರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)