ಸುದ್ದಿ ಸಂಕ್ಷಿಪ್ತ

ಪೊಲೀಸ್ ಕಾನ್ಸಟೇಬಲ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ರಾಜ್ಯ( ಮಡಿಕೇರಿ) ಮೇ 27:- ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಪ್ರಸಕ್ತ ಸಾಲಿನಲ್ಲಿ ಖಾಲಿ ಇದ್ದ ಸಿವಿಲ್/ ಮಹಿಳಾ ಪೊಲೀಸ್     ಕಾನ್ಸಟೇಬಲ್  ಹುದ್ದೆಗಳ ನೇಮಕಾತಿ ಸಂಬಂಧ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 25 ರ  ವರೆಗೆ ಅವಕಾಶವಿದೆ.

ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ ಅರ್ಹ ಅಭ್ಯರ್ಥಿಗಳು ಜೂನ್ 25 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ರಾಜ್ಯ ಪೊಲೀಸ್ ಅಧಿಕೃತ ವೆಬ್‍ಸೈಟ್  https://recruitment.ksp.gov.in ಅಥವಾ www.ksp.gov.in   ಗಮನಿಸಬಹುದಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರ ಅವರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: