ಕರ್ನಾಟಕಪ್ರಮುಖ ಸುದ್ದಿ

ಸಾಮೂಹಿಕ ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್

ಬೆಂಗಳೂರು,ಮೇ 28-ಬಾಂಗ್ಲಾದೇಶ ಮೂಲದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಪೊಲೀಸರು ಇಂದು ಬೆಳಿಗ್ಗೆ ಆರೋಪಿಗಳನ್ನು ಕರೆದುಕೊಂಡು ಸ್ಥಳ ಮಹಜರು ಮಾಡಲು ತೆರಳಿದ್ದರು. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಆಗ ಪೊಲೀಸರು ಆತ್ಮ ರಕ್ಷಣೆಗಾಗಿ ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ.

ರಾಮಮೂರ್ತಿನಗರದ ಮನೆಯೊಂದರಲ್ಲಿ ಕೆಲ‌ ದಿನ ಹಿಂದೆ ಬಾಂಗ್ಲಾದೇಶದ 23 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಅದರ ವಿಡಿಯೋವನ್ನು ಆರೋಪಿಗಳೇ ಚಿತ್ರೀಕರಿಸಿ ಸಾಮಾಜಿಕ‌ ಜಾಲತಾಣಗಳಲ್ಲಿ‌ ಹರಿಬಿಟ್ಟಿದ್ದರು. ವಿಡಿಯೋ ಆಧರಿಸಿ‌ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದ ನಗರದ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: