ಕರ್ನಾಟಕಪ್ರಮುಖ ಸುದ್ದಿ

ರಾಷ್ಟ್ರಪತಿ ಹುದ್ದೆಗೆ ದೇವೇಗೌಡ?

ಬೆಂಗಳೂರು: ರಾಷ್ಟ್ರಪತಿ ಹುದ್ದೆ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರಿಗೆ ಒಲಿದು ಬರಬಹುದೇ ಹೀಗೊಂದು ಪ್ರಶ್ನೆ ರಾಜಕೀಯ ವಲಯದಲ್ಲಿ  ಎದ್ದಿದೆ. ಎನ್‍ಡಿಎ ಅಭ್ಯರ್ಥಿ ವಿರುದ್ಧ ಕಾಂಗ್ರೆಸ್ ಬೆಂಬಲದೊಂದಿಗೆ ದೇವೇಗೌಡರನ್ನು ಸರ್ವಸಮ್ಮತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಕುರಿತು ಚರ್ಚೆ ನಡೆದಿದೆ ಎಂಬ ವದಂತಿ ದೆಹಲಿ ಮಟ್ಟದಲ್ಲಿ ವ್ಯಾಪಕವಾಗಿದೆ ಎಂದು ಹೇಳಲಾಗುತ್ತಿದೆ.

ಇಂತಹ ಒಂದು ವದಂತಿ ಹಿಂದೊಮ್ಮೆ ಬಂದಾಗ ದೇವೇಗೌಡರು ರಾಷ್ಟ್ರಪತಿ ಅಭ್ಯರ್ಥಿಯಾಗುವ ಸಾಧ್ಯತೆಯನ್ನು ಸಾರಾಸಗಟಾಗಿ ತಳ್ಳಿಹಾಕಿದರು. ಹೀಗಿದ್ದರೂ ಕೂಡ ದೇವೇಗೌಡರನ್ನು ಎನ್‍ಡಿಎ ವಿರುದ್ಧ ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಆಶಯವನ್ನು ಬಿಜೆಪಿ ವಿರೋಧಿ ಗುಂಪು ರಾಷ್ಟ್ರಮಟ್ಟದಲ್ಲಿ ವ್ಯಕ್ತಪಡಿಸುತ್ತಿದೆ. ದೇವೇಗೌಡರು ಒಪ್ಪದಿದ್ದರೆ ಜೆಡಿಯು ಮುಖಂಡ ಶರದ್ ಯಾದವ್‍ರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಈ ಕುರಿತು ಈಗಾಗಲೇ ಎಡರಂಗ ಹಾಗೂ ಜನತಾ ಪರಿವಾರದ ಮುಖಂಡರು ಸೋನಿಯಾ ಗಾಂಧಿ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮತ್ತೊಮ್ಮೆ ಕಣಕ್ಕಿಳಿಯಲು ಒಪ್ಪಿದರೆ ಅವರನ್ನೇ ಅಭ್ಯರ್ಥಿಯಾಗಿ ಮಾಡುವ ಬಗ್ಗೆಯೂ ಚಿಂತನೆ ನಡೆದಿದೆ ಎಂದು ಹೇಳಲಾಗುತ್ತಿದೆ.

Leave a Reply

comments

Related Articles

error: