ಮೈಸೂರು

ರಾಜಕೀಯಕ್ಕೆ ರಂಗಪ್ಪ ಪ್ರವೇಶ ಸಾಧ್ಯತೆ!

ಮೈಸೂರು ವಿವಿಯ ವಿ‍ಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ರಾಜಕೀಯ ರಂಗಕ್ಕೆ ಪ್ರವೇಶ ಮಾಡಲಿದ್ದಾರೆ. ಹಾಗಂತ ಎಲ್ಲೆಡೆ ವದಂತಿ ಹರಡಿದೆ. ಖುದ್ದು ರಂಗಪ್ಪ ಅವರೇ ಈ ಕುರಿತ  ಇಂಗಿತ ವ್ಯಕ್ತಪಡಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಪ್ರವೇಶಕ್ಕೆ ನಾನು ಸಿದ್ಧನಿದ್ದೇನೆ. ಈಗಾಗಲೇ ಜೆಡಿಎಸ್ ಸೇರುವಂತೆ ಪಕ್ಷದ ವರಿಷ್ಠರಾದ ಎಚ್.ಡಿ.ದೇವೆಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಆಹ್ವಾನಿಸಿದ್ದಾರೆ. ಜೆಡಿಎಸ್ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದೇನೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ. (ಎಲ್.ಜಿ)

Leave a Reply

comments

Related Articles

error: