ಸುದ್ದಿ ಸಂಕ್ಷಿಪ್ತ

ಅರ್ಜಿ ಆಹ್ವಾನ ಅವಧಿ ವಿಸ್ತರಣೆ

ಮಡಿಕೇರಿ ಜೂ.2:- ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ” ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3 ಬಿ ಮತ್ತು ಸಾಮಾನ್ಯ ವರ್ಗದ ಅರ್ಹ ವಿದ್ಯಾರ್ಥಿಗಳಿಂದ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ಎಸ್‍ಎಸ್‍ಪಿ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಗೊಂಡಿದ್ದು, ಅರ್ಜಿಯನ್ನು ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುವಂತೆ (ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ) ಅರ್ಜಿಯನ್ನು ಸಲ್ಲಿಸಲು ಜೂನ್ 20 ರವರೆಗೆ ಅವಕಾಶವಿದೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ:www.ssp.postmatric.karnataka.gov.in ನಲ್ಲಿ ಸಲ್ಲಿಸಬಹುದು. ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಭೇಟಿ ನೀಡಬೇಕಾದ ಇಲಾಖಾ ವೆಬ್‍ಸೈಟ್ www.bcw.karnataka.gov.in ನ್ನು ನೋಡಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ: 8050770005/ 8050770004, ಇಮೇಲ್: [email protected] ದೂರವಾಣಿ ಸಂಖ್ಯೆ: 080-35254757 ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ನಿಂಗರಾಜು ಅವರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: