ದೇಶಪ್ರಮುಖ ಸುದ್ದಿ

ವಾಜಪೇಯಿಯಂತಲ್ಲ ಮೋದಿ ಎಂಬುದು ಮೆಹಬೂಬ ಮಾತಿನ ಅರ್ಥ: ಕಾಂಗ್ರೆಸ್ ನಾಯಕ

ಲಖನೌ: ಜಮ್ಮು ಕಾಶ್ಮೀರ ಪರಿಸ್ಥಿತಿ ಹದಗೆಡಲು ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರದಲ್ಲಿನ ಬಿರುಕು ಕಾರಣ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಸ್ವತಃ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರೇ ನಿನ್ನೆಯಷ್ಟೇ ಕಾಶ್ಮೀರ ಪರಿಸ್ಥಿತಿ ನಿಭಾಯಿಸಲು ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿಯವರು ಮಾಜಿ ಪ್ರಧಾನಿ ವಾಜಪೇಯಿ ಅವರ ನೀತಿಗಳನ್ನು ಅನುಸರಿಸಬೇಕು ಎಂದು ಹೇಳಿರುವುದು ಮೈತ್ರಿಯಲ್ಲಿನ ಬಿರುಕು ತೋರಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಪ್ರಮೋದ್ ತಿವಾರಿ ಹೇಳಿದ್ದಾರೆ.

“ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಾದಿ ತಪ್ಪು ಎಂದು ಮುಫ್ತಿಯವರೇ ಒಪ್ಪಿಕೊಂಡಿದ್ದಾರೆ. ಮೋದಿ ತಪ್ಪು ಹೆಜ್ಜೆಗಳನ್ನಿಡುತ್ತಿದ್ದಾರೆ ಎಂದನಿಸಿದರೆ ಅವರೊಂದಿಗಿನ ಮೈತ್ರಿಯನ್ನು ಏಕೆ ಮುಂದುವರೆಸುತ್ತಿದ್ದಾರೆ. ಇಂದಿರಾಗಾಂಧಿ, ರಾಜೀವ್ ಗಾಂಧಿಯವರು ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೋಲ್ಳುತ್ತಿದ್ದರು. ಆದರೆ, ಪ್ರಸ್ತುತ ಅಧಿಕಾರದಲ್ಲಿರುವ ಸರ್ಕಾರ ತಪ್ಪು ಹಾದಿಯಲ್ಲಿ ನಡೆಯುತ್ತಿದೆ ಎಂಬುದು ಈಗ ಬಹಿರಂಗವಾಗಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಈ ಮಟ್ಟಕ್ಕೆ ಹಾಳಾಗಲು ಪಿಡಿಪಿ ಮತ್ತು ಬಿಜೆಪಿ ನಡುವಿನ ಮೈತ್ರಿಯೇ ಕಾರಣ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

(ಎನ್.ಬಿ.ಎನ್)

Leave a Reply

comments

Related Articles

error: