ಮೈಸೂರು

2020ರಲ್ಲಿ ದೇಶವನ್ನು ಮಲೇರಿಯಾ ಮುಕ್ತ ಮಾಡುವ ಗುರಿ : ಆರೋಗ್ಯಾಧಿಕಾರಿ ಪಿ.ರವಿ

ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ವತಿಯಿಂದ  ನಜರ್ ಬಾದ್ ಜಿಲ್ಲಾ ಆರೋಗ್ಯ ಇಲಾಖೆ ಎದುರು ಆಯೋಜಿಸಲಾದ ಜಾಥಾಕ್ಕೆ ತಾಲೂಕು ಆರೋಗ್ಯಾಧಿಕಾರಿ ಪಿ.ರವಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು 2020ಕ್ಕೆ ದೇಶವನ್ನು ಮಲೇರಿಯಾಮುಕ್ತ ಮಾಡುವ ಗುರಿ ಹೊಂದಲಾಗಿದೆ. ಈ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಜಾಥಾ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಮತ್ತು ಪ್ರಾಥಮಿಕ ಮಟ್ಟದ ಎಲ್ಲಾ ಕೇಂದ್ರಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ದೇಶಾದ್ಯಂತ ಅರಿವು ಮೂಡಿಸುವ ಸಲುವಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಮಲೇರಿಯಾವನ್ನು  ಸಂಪೂರ್ಣ ನಿರ್ಮೂಲನೆ ಮಾಡಬೇಕಿದೆ ಎಂದು ತಿಳಿಸಿದರು. ಜಾಥಾವು ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯಿಂದ ಆರಂಭವಾಗಿ ನಜರ್ ಬಾದ್, ಶಾಲಿವಾಹನ ರಸ್ತೆಯ ಮೂಲಕ ಸಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿತು. ಜಾಥಾದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ.ಪ್ರಕಾಶ್, ತಾಲೂಕು ಮಟ್ಟದ ಹಿರಿಯ ಆರೋಗ್ಯಾಧಿಕಾರಿ ಶಿವಮೂರ್ತಿ, ತಾಲೂಕು ಮಟ್ಟದ ನೋಡಲ್ ಅಧಿಕಾರಿ ಸಿರಾಜ್ ಅಹ್ಮದ್ , ಆರೋಗ್ಯ ಸಹಾಯಕ ಸಹಾಯಕಿಯರು ಪಾಲ್ಗೊಂಡಿದ್ದರು.( ಬಿ.ಎಂ-ಎಸ್.ಎಚ್)

Leave a Reply

comments

Related Articles

error: