
ಕರ್ನಾಟಕಪ್ರಮುಖ ಸುದ್ದಿ
ಲಾಕ್ ಡೌನ್ ವಿಸ್ತರಣೆ: ಇಂದು ಸಿಎಂ ಬಿಎಸ್ವೈ ನೇತೃತ್ವದಲ್ಲಿ ಮಹತ್ವದ ಸಭೆ
ಬೆಂಗಳೂರು,ಜೂ.2-ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಿಸಬೇಕೋ, ಬೇಡವೋ ಎಂಬ ವಿಚಾರದ ಕುರಿತು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಹತ್ವದ ಸಭೆ ಕರೆದಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಂಜೆ 4.30ಕ್ಕೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆಯಲ್ಲಿ ಕೋವಿಡ್ ತಜ್ಞರು, ವೈದ್ಯರು ಪಾಲ್ಗೊಳ್ಳಲಿದ್ದಾರೆ. ಇವರಿಂದ ಯಾವಾಗ ಅನ್ಲಾಕ್ ಮಾಡಿದರೆ ಒಳ್ಳೆಯದು ಎಂಬ ಬಗ್ಗೆ ಸಿಎಂ ಮಾಹಿತಿ ಪಡೆಯಲಿದ್ದಾರೆ.
ನಂತರ ಸಂಜೆ 6ಕ್ಕೆ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಲಿದ್ದು, ತಜ್ಞರ ಸಭೆಯ ಸಲಹೆಗಳ ಕುರಿತು ಸಿಎಂ ಮರು ಚರ್ಚೆ ಮಾಡಲಿರುವರು. ಸಚಿವರು ಹಾಗೂ ಅಧಿಕಾರಿಗಳ ಅಭಿಪ್ರಾಯ ಆಲಿಸಿ ಅಂತಿಮ ನಿರ್ಧಾರವನ್ನು ಬಿಎಸ್ವೈ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ.
ಕರ್ನಾಟಕದ ಕೊರೊನಾ ತಾಂತ್ರಿಕ ಸಲಹಾ ಸಮಿತಿ ಈಗಾಗಲೇ ಕರ್ನಾಟಕದಲ್ಲಿ ಲಾಕ್ಡೌನ್ನ್ನು ವಿಸ್ತರಣೆ ಮಾಡುವಂತೆ ವರದಿ ನೀಡಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ಲಾಕ್ಡೌನ್ ಮುಂದುವರಿಸಲು ಒತ್ತಾಯಿಸಿದ್ದಾರೆ. (ಎಂ.ಎನ್)