ದೇಶಪ್ರಮುಖ ಸುದ್ದಿಮನರಂಜನೆ

ಲಾಕ್ ಡೌನ್ ನಿಯಮ ಉಲ್ಲಂಘನೆ: ಟೈಗರ್ ಶ್ರಾಫ್, ದಿಶಾ ಪಟಾನಿ ವಿರುದ್ಧ ಎಫ್ಐಆರ್

ಮುಂಬೈ,ಜೂ.3-ಕೋವಿಡ್ ಲಾಕ್ ಡೌನ್ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ನಟ ಟೈಗರ್ ಶ್ರಾಫ್ ಮತ್ತು ನಟಿ ದಿಶಾ ಪಟಾನಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಲಾಕ್‌ಡೌನ್‌ ನಿಯಮಗಳನ್ನು ಗಾಳಿಗೆ ತೂರಿ ನಟ ಟೈಗರ್ ಶ್ರಾಫ್ ಹಾಗೂ ನಟಿ ದಿಶಾ ಪಟಾನಿ ಬೀದಿಯಲ್ಲಿ ಸುತ್ತಾಡುತ್ತಿದ್ದರು ಎನ್ನಲಾಗಿದೆ. ಕಾರಣವಿಲ್ಲದೆ ಕಾರಿನಲ್ಲಿ ಎಲ್ಲಿಗೋ ಹೊರಟ್ಟಿದ್ದ ಟೈಗರ್ ಶ್ರಾಫ್ ಮತ್ತು ದಿಶಾ ಪಟಾನಿಯನ್ನು ಬಾಂದ್ರಾ ಬ್ಯಾಂಡ್‌ಸ್ಟ್ಯಾಂಡ್‌ನಲ್ಲಿ ಪೊಲೀಸರು ತಡೆದಿದ್ದಾರೆ.

ವಿನಾಕಾರಣ ಸಾರ್ವಜನಿಕ ಸ್ಥಳದಲ್ಲಿ ಓಡಾಡಿದ ಕಾರಣಕ್ಕೆ ಟೈಗರ್ ಶ್ರಾಫ್ ಹಾಗೂ ದಿಶಾ ಪಟಾನಿ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಐಪಿಸಿ ಸೆಕ್ಷನ್ 188 ಅಡಿಯಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಲಾಕ್‌ಡೌನ್ ನಿಯಮ ಉಲ್ಲಂಘನೆಗಾಗಿ ಏಪ್ರಿಲ್ 5 ರಿಂದ ಜೂನ್ 1 ರವರೆಗೂ ಸುಮಾರು 20,000ಕ್ಕೂ ಅಧಿಕ ಜನರ ವಿರುದ್ಧ ಮುಂಬೈ ಪೊಲೀಸರು 19,963 ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಈ ಪೈಕಿ ಬಹುತೇಕ ಪ್ರಕರಣಗಳು ದಾಖಲಾಗಿರುವುದು ವಿನಾಕಾರಣ ಸಾರ್ವಜನಿಕ ಸ್ಥಳಗಳಲ್ಲಿ ಸುತ್ತಾಡಿದ್ದರಿಂದಲೇ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಂದ್ಹಾಗೆ, ಟೈಗರ್ ಶ್ರಾಫ್ ಮತ್ತು ದಿಶಾ ಪಟಾನಿ ಡೇಟಿಂಗ್ ಮಾಡ್ತಿದ್ದಾರೆ ಎಂಬ ರೂಮರ್ಸ್ ಇಂದು ನಿನ್ನೆಯದ್ದಲ್ಲ. ತಮ್ಮ ನಡುವಿನ ಆತ್ಮೀಯ ಸಂಬಂಧದ ಬಗ್ಗೆ ಇಬ್ಬರೂ ತುಟಿಕ್ ಪಿಟಿಕ್ ಎಂದಿಲ್ಲ. ಆದರೂ ಎಲ್ಲೇ ಹೋದರೂ ಇಬ್ಬರೂ ಜೊತೆಯಾಗಿಯೇ ಓಡಾಡುತ್ತಾರೆ. ಇತ್ತೀಚೆಗಷ್ಟೇ ಇಬ್ಬರೂ ಮಾಲ್ದೀವ್ಸ್‌ಗೆ ಹೋಗಿ ಬಂದಿದ್ದರು. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: