ಕರ್ನಾಟಕಪ್ರಮುಖ ಸುದ್ದಿ
ಇಂದು ಆ್ಯಂಬುಲೆನ್ಸ್ ಹಸ್ತಾಂತರ
ರಾಜ್ಯ(ಮಡಿಕೇರಿ) ಜೂ.4:- ಹುಬ್ಬಳ್ಳಿಯ ಡಿಆರ್ಎನ್ ಸಂಸ್ಥೆ ವತಿಯಿಂದ ವೆಂಟಿಲೇಟರ್, ಆಕ್ಸಿಜನ್ ಕಿಟ್. ಎಸಿ ಸೇರಿದಂತೆ ಸುಸಜ್ಜಿತ ವ್ಯವಸ್ಥೆಯುಳ್ಳ ಆಂಬ್ಯುಲೆನ್ಸ್ ನ್ನು ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಹಸ್ತಾಂತರಿಸುವ ಕಾರ್ಯವು ಇಂದು ಮಧ್ಯಾಹ್ನ 12.30 ಗಂಟೆಗೆ ನಡೆಯಲಿದೆ.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಜಿ.ಬೋಪಯ್ಯ ಅವರ ಕೋರಿಕೆ ಹಿನ್ನಲೆಯಲ್ಲಿ ಹುಬ್ಬಳ್ಳಿಯ ಡಿಆರ್ಎನ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ದಿನೇಶ್ ಆರ್.ನಾಯಕ್ ಅವರು ನಗರದ ಕೋವಿಡ್ ಆಸ್ಪತ್ರೆಗೆ 30 ಲಕ್ಷ ರೂ ಮೌಲ್ಯದ ಸುಸಜ್ಜಿತ ಅಂಬ್ಯುಲೆನ್ಸ್ ಕೊಡುಗೆಯಾಗಿ ನೀಡಲಿದ್ದಾರೆ.
ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ ಇತರರು ಪಾಲ್ಗೊಳ್ಳಲಿದ್ದಾರೆ. (ಜಿ.ಕೆ,ಎಸ್.ಎಚ್)