ಕರ್ನಾಟಕಪ್ರಮುಖ ಸುದ್ದಿಮೈಸೂರು

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮಾಡಿರತಕ್ಕ ಸೇವೆಯನ್ನು ನಾವೆಲ್ಲರೂ ಸ್ಮರಿಸಬೇಕು : ಸಚಿವ ಎಸ್.ಟಿ.ಸೋಮಶೇಖರ್

ಅಧಿಕಾರಿಗಳ ವಿಷಯ ಉಸ್ತುವಾರಿ ಸಚಿವರಿಗೂ ಮೀರಿದ್ದು : ಸಚಿವರ ಸ್ಪಷ್ಟನೆ

ಮೈಸೂರು,ಜೂ.4:- ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮಾಡಿರತಕ್ಕ ಸೇವೆಯನ್ನು ನಾವೆಲ್ಲರೂ ಸ್ಮರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಅವರಿಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 137ನೇ ಜಯಂತಿ ಪ್ರಯುಕ್ತ ಕೆ.ಆರ್.ವೃತ್ತದಲ್ಲಿರುವ ಒಡೆಯರ್ ಪ್ರತಿಮೆಗೆ ಪುಷ್ಪಾರ್ಚನೆಗೈದು ಗೌರವ ಸಮರ್ಪಿಸಿದರು. ಬಳಿಕ ಮಾತನಾಡಿದ ಅವರು  ಜಿಲ್ಲೆಗೆ  ಏನು ಕೆಲಸಗಳನ್ನು ಮಾಡಿದ್ದರೋ ಅಂತಹವರನ್ನು ಸ್ಮರಿಸುವುದಕ್ಕೋಸ್ಕರ ಕೆಲವರಿಗೆ ಸನ್ಮಾನ ಮಾಡಬೇಕು ಎನ್ನುವ ಸಮಿತಿಯನ್ನು ರಚಿಸಲಾಗಿತ್ತು. ಲಾಕ್ ಡೌನ್ ಸಂದರ್ಭದಲ್ಲಿ, ಕೊರೋನಾ ಸಂದರ್ಭದಲ್ಲಿ ಮಾಡಲಿಕ್ಕೆ ಆಗಿರಲಿಲ್ಲ. ಹಿಂದಿನ ಜಿಲ್ಲಾಧಿಕಾರಿ ಅಭಿರಾಮ್ ಅಧ್ಯಕ್ಷತೆಯಲ್ಲಿ 12ಜನ ಗಣ್ಯರನ್ನು ಆಯ್ಕೆ ಮಾಡಲಾಗಿತ್ತು. ಲಾಕ್ ಡೌನ್ ಮುಗಿದ ನಂತರ ಅವರಿಗೆ ಸನ್ಮಾನ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ವಿಶೇಷವಾಗಿ ಇಂದು ಎಲ್ಲ ಜನಪ್ರತಿನಿಧಿಗಳು ಅಧಿಕಾರಿಗಳು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮಾಡಿರತಕ್ಕ ಸೇವೆಯನ್ನು ನಾವೆಲ್ಲ ನೆನಪಿಸಿಕೊಳ್ಳಬೇಕು. ಲಾಕ್ ಡೌನ್ ಇರುವ ಕಾರಣ ಅತ್ಯಂತ ಸರಳವಾಗಿ ಜನಪ್ರತಿನಿಧಿಗಳ ಸಮೇತ ಪುಷ್ಪಾರ್ಚನೆಗೈದು  ಗೌರವ ಸಮರ್ಪಿಸಲಾಗಿದೆ ಎಂದರು.

ಈ ಸಂದರ್ಭ ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ತನ್ವೀರ್ ಸೇಠ್, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ.ಜಿ.ಟಿ.ದೇವೇಗೌಡ, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಕೋಟೆ ಶಿವಣ್ಣ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಪಾಲಿಕೆಯ ಆಯುಕ್ತರಾದ ಶಿಲ್ಪಾನಾಗ್ ಸಂಘರ್ಷ ಕುರಿತು ಪ್ರತಿಕ್ರಿಯಿಸಿ  ಸರ್ಕಾರದ ಮುಖ್ಯಕಾರ್ಯದರ್ಶಿಗಳು ಮೈಸೂರಿಗೆ ಬರುತ್ತಿದ್ದಾರೆ. ಅವರ ಗಮನಕ್ಕೆ ತಂದಿದ್ದೇವೆ.ಅವರು  ಬಂದಾದ ನಂತರ ಹೆಚ್ಚಿನ ಮಾಹಿತಿ ನೀಡುತ್ತೇವೆ ಎಂದರು.    ಮೈಸೂರು ಸಾಂಸ್ಕೃತಿಕ ನಗರ, ಕಳೆದ ಒಂದು ವರ್ಷದಿಂದ ಕೋವಿಡ್ ನಿಂದ ನರಳತಕ್ಕಂತದ್ದು. ಬೆಂಗಳೂರು ಹೊರತುಪಡಿಸಿದರೆ ಮೈಸೂರು ಅತಿ ಹೆಚ್ಚು ಕೋವಿಡ್ ಇರತಕ್ಕಂತದ್ದು. ಕೋವಿಡ್ ನಿಯಂತ್ರಣಕ್ಕೆ ತರಲು ಮೈಸೂರಿನ ಜನರ ಹಿತದೃಷ್ಟಿಯಿಂದ ಕೋವಿಡ್ ಹೇಗೆ ನಿಯಂತ್ರಣಕ್ಕೆ ತರಬಹುದೆಂಬ ಚಿಂತನೆಯನ್ನು ಹೊರತುಪಡಿಸಿದರೆ ಮಿಕ್ಕ ಯಾವುದೂ ಡೈರೆಕ್ಷನ್ ಕುರಿತು ಮಾತನಾಡುವುದು ಇಲ್ಲ.  ಕೋವಿಡ್ ಕಡಿಮೆ ಮಾಡುವಂತದ್ದು. ಇಷ್ಟೆಲ್ಲ ಒಳ್ಳೆಯ ಕೆಲಸ ಮಾಡಿದರೂ ಕೂಡ ನನ್ನ ಮನಸ್ಸಿಗೆ ನೋವಾಗಿದೆ. ಮೈಸೂರಿನಲ್ಲಿ ಕೊರೋನಾ ಕಡಿಮೆ ಮಾಡತಕ್ಕಂತದ್ದಕ್ಕೆ  ಎಲ್ಲರ ಅಭಿಪ್ರಾಯ ಪಡೆದು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೋ ಅದಕ್ಕೂ ತೊಂದರೆಯಾಗುತ್ತಿದೆ. ಕೋವಿಡ್ ನಿಯಂತ್ರಣಕ್ಕೆ ಮಾತ್ರ, ವಿನಃ ಬೇರೆ ಸಣ್ಣಪುಟ್ಟದ್ದಕ್ಕೆ ಗಮನ ಕೊಡುವಷ್ಟು ವ್ಯವಧಾನ ಇಲ್ಲ. ಮೈಸೂರಿನ ಜನತೆ ಗೌರವಯುತವಾಗಿ ಇದ್ದಾರೆ. ಗೌರವದ ವಿರುದ್ಧ ನಾನು ಹೋಗಲ್ಲ, ಮೈಸೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಏನೆಲ್ಲ ಮಾಡಬೇಕೋ ಅದನ್ನು ಮಾಡುತ್ತಿದ್ದೇನೆ. ಅಧಿಕಾರಿಗಳ ವಿಷಯ ಉಸ್ತುವಾರಿ ಸಚಿವರಿಗೂ ಮೀರಿದ್ದು, ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಮುಖ್ಯಕಾರ್ಯದರ್ಶಿಗಳ ಗಮನಕ್ಕೂ ತಂದಿದ್ದೇವೆ. ಸರಿಪಡಿಸುವುದಾಗಿ ಹೇಳಿದ್ದಾರೆಂದು ಸ್ಪಷ್ಟಪಡಿಸಿದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: