ಕರ್ನಾಟಕಪ್ರಮುಖ ಸುದ್ದಿ

ಕೊಡಗು ಜಿಲ್ಲೆಯಲ್ಲಿ ಶುಕ್ರವಾರ 269 ಹೊಸ ಕೋವಿಡ್-19 ಪ್ರಕರಣ

ರಾಜ್ಯ(ಮಡಿಕೇರಿ)ಜೂ.5:- ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆ ವೇಳೆಗೆ 269 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 241 ಆರ್.ಟಿ.ಪಿ.ಸಿ.ಆರ್ ಮತ್ತು 28 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 79 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 78 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 128 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 108 ಆರ್.ಟಿ.ಪಿ.ಸಿ.ಆರ್ ಮತ್ತು 20 ಪ್ರಕರಣಗಳು ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 62 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 55 ಆರ್.ಟಿ.ಪಿ.ಸಿ.ಆರ್ ಮತ್ತು 7 ಪ್ರಕರಣ ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 25,541 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 444 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 23,043 ಮಂದಿ ಗುಣಮುಖರಾಗಿದ್ದಾರೆ. 2166 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2 ಸಾವು ಉಂಟಾಗಿದ್ದು, ಒಟ್ಟು 332 ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 313 ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.18.19 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: