ಮೈಸೂರು

ಮೈಸೂರು ನಾಗರಿಕರ ವೇದಿಕೆ ವತಿಯಿಂದ ಜಿಲ್ಲಾಡಳಿತಕ್ಕೆ 5ಸಾವಿರ ಔಷಧಿ ಕಿಟ್ ಹಸ್ತಾಂತರ

ಮೈಸೂರು,ಜೂ.4:- ಮೈಸೂರು ನಾಗರಿಕರ ವೇದಿಕೆ ವತಿಯಿಂದ ಜಿಲ್ಲಾಡಳಿತಕ್ಕೆ 5ಸಾವಿರ ಔಷಧಿ ಕಿಟ್ ನೀಡ ಲಾಯಿತು.
ನಗರದ ಸುತ್ತೂರು ಶಾಖಾ ಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಯವರ ದಿವ್ಯ ಸಾನಿಧ್ಯದಲ್ಲಿ ಹಸ್ತಾಂತರ ಮಾಡಲಾಯಿತು.
ಜಿಲ್ಲಾಡಳಿತ ದ ಪರವಾಗಿ ಎಸ್.ಟಿ.ಸೋಮಶೇಖರ್ ಕಿಟ್ ಗಳನ್ನು ಸ್ವೀಕರಿಸಿದ ರು.
ಸುತ್ತೂರು ಮಠದ ಶ್ರೀಗಳು ಮಾತನಾಡಿ ಕೋವಿಡ್ ಸೋಂಕಿತರನ್ನು ನೋಯಿಸಲು ಹೋಗಬೇಡಿ. ಸಾಧ್ಯವಾದರೆ ಅವರಿಗೆ ನೆರವು ನೀಡಿ. ಇತ್ತೀಚಿಗೆ ಚಾಮರಾಜನಗರದಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖರಾದವರು ನಮ್ಮನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲವೆಂದು ಬೇಸರಗೊಂಡು ಕುಟುಂಬದವರು ಆತ್ಮಹತ್ಯೆ ಮಾಡಿಕೊಂಡರು. ಇದು ಬೇಸರದ ಸಂಗತಿ. ಇಂಥ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭ ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ಎಸ್.ಎ.ರಾಮದಾಸ್, ತನ್ವೀರ್ ಸೇಠ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: