ಮೈಸೂರು

ಮರಕ್ಕೆ ಕಾರು ಡಿಕ್ಕಿ : ಸಿಆರ್‌ಪಿಎಫ್ ಯೋಧ ಸಾವು

ಮೈಸೂರು,ಜೂ.5:- ರಸ್ತೆ ಬದಿಯಲ್ಲಿದ್ದ ಮರಕ್ಕೆ  ಕಾರೊಂದು  ಗುದ್ದಿದ ಪರಿಣಾಮ ಸಿಆರ್‌ಪಿಎಫ್ ಯೋಧರೋರ್ವರು ಸಾವನ್ನಪ್ಪಿರುವ ಘಟನೆ ಹುಣಸೂರು-ಪಿರಿಯಾಪಟ್ಟಣ ಹೆದ್ದಾರಿಯ ಅರಸು ಕಲ್ಲಹಳ್ಳಿ ಬಳಿ ನಿನ್ನೆ ರಾತ್ರಿ ನಡೆದಿದೆ.

ಮೃತರನ್ನು  ಪಿರಿಯಾಪಟ್ಟಣ ತಾಲೂಕಿನ ಗೊರಳ್ಳಿಯ ನಾಗರಾಜಶೆಟ್ಟಿಯವರ ಪುತ್ರ ಅಣ್ಣಯ್ಯ ಶೆಟ್ಟಿ (35) ಎಂದು ಹೇಳಲಾಗಿದೆ. ಇವರು ಮಹಾರಾಷ್ಟ್ರದ ನಕ್ಸಲ್ ಏರಿಯಾದ ಗಡ್ಸರ್‌ನಲ್ಲಿ 14 ವರ್ಷಗಳಿಂದ ಯೋಧರಾಗಿ ಕಾರ್ಯನಿರ್ವಹಿಸುತ್ತಿದ್ದರು. ರಜೆಯ ಮೇಲೆ ಊರಿಗೆ ಬಂದಿದ್ದ ಇವರು ಮೈಸೂರಿಗೆ ಆಗಮಿಸಿ ಬಳಿಕ ತಮ್ಮ ಕೆಲಸ ಮುಗಿಸಿಕೊಂಡು   ಕಾರಿನಲ್ಲಿ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ತಾಲೂಕಿನ ಕಲ್ಲಹಳ್ಳಿ ಗೇಟ್‌ ನ ಬಳಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಕುರಿತು ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: