ಮೈಸೂರು

ಜೈ ಭೀಮ್ ಜನಸ್ಪಂದನ ವೇದಿಕೆ ವತಿಯಿಂದ ವಿಶ್ವ ಪರಿಸರ ದಿನ ಆಚರಣೆ

ಮೈಸೂರು,ಜೂ.5:-  ಜೈ ಭೀಮ್ ಜನಸ್ಪಂದನ ವೇದಿಕೆ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಉರಿಲಿಂಗಪೆದ್ದಿಶ್ವರಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಅವರು ಮಾತನಾಡಿ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿ ದಂತಹ ಯುವಕರು ಈ ರೀತಿ ಮಾದರಿ ಕಾರ್ಯಗಳನ್ನು ಮಾಡಿದರೆ ಮುಂದಿನ ಯುವ ಪೀಳಿಗೆಗೆ ಮಾದರಿಯಾಗುತ್ತದೆ. ಪರಿಸರದ ಬಗ್ಗೆ ಕಾಳಜಿಯನ್ನು ಎತ್ತಿ ತೋರಿಸುತ್ತದೆ. ಈ ನಿಟ್ಟಿನಲ್ಲಿ ಈ ಒಂದು ಕಾರ್ಯಕ್ರಮವು ವರ್ಷದ ಎಲ್ಲ ದಿನಗಳಲ್ಲೂ ನಡೆಯಲಿ ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ಜೈಭೀಮ್ ಜನಸ್ಪಂದನಾ ವೇದಿಕೆ ಅಧ್ಯಕ್ಷರಾದ ಚೇತನ್ ಕಾಂತರಾಜು ಮಾತನಾಡಿ ವಿಶ್ವ ಪರಿಸರ ದಿನದ ಅಂಗವಾಗಿ ಸಾರ್ವಜನಿಕರಿಗೆ ಉಚಿತವಾಗಿ ಗಿಡ, ಸಸ್ಯಗಳ ಬಗ್ಗೆ ಜಾಗೃತಿಯನ್ನು ಹಲವು ವರ್ಷಗಳಿಂದ ಮುಂದುವರಿಸಿಕೊಂಡು ಹೋಗುತ್ತಿದ್ದು ಪರಿಸರ ಮನುಷ್ಯನ ಜೀವನದಲ್ಲಿ ಎಷ್ಟು ಮಹತ್ವ ಎಂಬುದನ್ನು ತಿಳಿಯಬೇಕಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಧುಸೂದನ್, ಪ್ರಕಾಶ್ ,ಶ್ರೀಕಾಂತ್, ಪ್ರತಾಪ್,ಪುಟ್ಟ, ಲೋಹಿತ್,ಅಖಿಲೇಶ್, ಸಾಗರ್, ಸುಮನ್,ರಾಕೇಶ್, ದರ್ಶನ್,ಪ್ರಜ್ವಲ್, ಪ್ರವೀಣ್ ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: