ಮೈಸೂರು

ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ನಿರ್ಗತಿಕರಿಗೆ ದಿನಸಿ ಕಿಟ್ ವಿತರಣೆ

ಮೈಸೂರು,ಜೂ.7:- ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಇಂದು ಬಡವರಿಗೆ , ನಿರ್ಗತಿಕರಿಗೆ, ಅಶಕ್ತರಿಗೆ ದಿನಸಿ ವಸ್ತುಗಳ ಕಿಟ್ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ದೇಗುಲದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ಅವರಿಂದು ಬಡವರಿಗೆ, ಅಶಕ್ತರಿಗೆ ದೇವಸ್ಥಾನದ ಆವರಣದಲ್ಲಿ ದಿನಸಿ ಕಿಟ್ ಗಳನ್ನು ವಿತರಿಸಿದರು. ಬಳಿಕ ಮಾತನಾಡಿದ ಅವರು ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದೆ ಜನರು ಸಂಕಷ್ಟದಲ್ಲಿದ್ದಾರೆ. ಅವರು ದಿನದ ಒಪ್ಪೊತ್ತಿನ ಊಟಕ್ಕೂ ಪರದಾಡಬೇಕಾದಂತಹ ಸ್ಥಿತಿ ನಿರ್ಮಾಣವಾಗಿದೆ. ಅದಕ್ಕಾಗಿ ನಾವು ಅಂತಹವರಿಗೆ ಸಹಾಯವಾಗಲಿ ಎಂಬ ದೃಷ್ಟಿಯಿಂದ ದಿನಸಿ ಕಿಟ್ ವಿತರಿಸುವ ಕಾರ್ಯ ಹಮ್ಮಿಕೊಂಡಿದ್ದೇವೆ. ಕೊರೋನಾ ದೇಶದಿಂದ ತೊಲಗಿ ಆದಷ್ಟು ಶೀಘ್ರ ಜನಜೀವನ ಮತ್ತೆ ಯಥಾಸ್ಥಿತಿಗೆ ಮರಳುವಂತಾಗಲೆಂದು ಶ್ರೀಯೋಗಾನರಸಿಂಹಸ್ವಾಮಿಯಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.

ದಿನಸಿ ಕಿಟ್ 5 ಕೆ.ಜಿ.ಅಕ್ಕಿ, 1 ಕೆ.ಜಿ ಸಕ್ಕರೆ, 1 ಕೆ.ಜಿ ತೊಗರಿಬೇಳೆ, 1 ಕೆ.ಜಿ ಉಪ್ಪನ್ನು ಒಳಗೊಂಡಿದೆ.

ಈ ಸಂದರ್ಭ ದೇವಸ್ಥಾನದ ಆಡಳಿತಾಧಿಕಾರಿ ಎನ್, ಶ್ರೀನಿವಾಸನ್ ಮತ್ತಿತರ ಸಿಬ್ಬಂದಿಗಳು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: