
ದೇಶಪ್ರಮುಖ ಸುದ್ದಿ
ಮುಂಬೈನಲ್ಲಿ ಕಟ್ಟಡ ಕುಸಿತ: ಓರ್ವ ಸಾವು, ಐವರಿಗೆ ಗಂಭೀರ ಗಾಯ
ಮುಂಬೈ,ಜೂ.7-ಕಟ್ಟಡ ಕುಸಿದು ಓರ್ವ ಮೃತಪಟ್ಟು, ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈಯ ಬಾಂದ್ರಾ ಪ್ರದೇಶದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಿದ್ದಾರೆ.
17 ಮಂದಿ ರಕ್ಷಣೆ: ಕಟ್ಟಡ ಕುಸಿದು ಅವಶೇಷಗಳಡಿ ಸಿಕ್ಕಿಹಾಕಿಕೊಂಡಿದ್ದ 17 ಮಂದಿಯನ್ನು ರಕ್ಷಿಸಲಾಗಿದೆ. ಬಾಂದ್ರಾ ಪೂರ್ವ ಪ್ರದೇಶದ ಖೆರವಾಡಿ ರಸ್ತೆ ಪ್ರದೇಶದಲ್ಲಿ ನಸುಕಿನ ಜಾವ 2 ಗಂಟೆ ಸುಮಾರಿಗೆ ಮನೆ ಮತ್ತೊಂದು ಕಟ್ಟಡದ ಮೇಲೆ ಕುಸಿದು ಬಿದ್ದು ಈ ದುರ್ಘಟನೆ ನಡೆದಿದೆ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ ತಿಳಿಸಿದೆ. (ಏಜೆನ್ಸೀಸ್, ಎಂ.ಎನ್)