
ಕರ್ನಾಟಕಪ್ರಮುಖ ಸುದ್ದಿ
ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಇನ್ನಿಲ್ಲ
ರಾಜ್ಯ(ಬೆಂಗಳೂರು)ಜೂ.8:- ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಸಿ ಎಂ ಉದಾಸಿ ನಿಧನ ರಾಗಿದ್ದಾರೆ.
ಅವರಿಗೆ 81ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ನಿಧನ ರಾಗಿದ್ದಾರೆ. ಅನಾರೋಗ್ಯದ ಕಾರಣ ಕಳೆದ ಕೆಲ ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. (ಕೆ.ಎಸ್,ಎಸ್.ಎಚ್)