ಕರ್ನಾಟಕಪ್ರಮುಖ ಸುದ್ದಿ

ಪ್ರವಾಹ ಉಂಟಾಗುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಡಿಸಿ

ರಾಜ್ಯ(ಮಡಿಕೇರಿ)ಜೂ.9:-  ಜಿಲ್ಲಾಧಿಕಾರಿಗಳು ಈ ದಿನ ಕುಶಾಲನಗರದಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪ್ರವಾಹ ಮುಂಜಾಗೃತಾ ಪೂರ್ವ ಸಿದ್ಧತಾ ಸಭೆಯನ್ನು ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೇಶನ ನೀಡಿದರು.

ನಂತರ ಜಿಲ್ಲಾಧಿಕಾರಿಗಳು ಕುಶಾಲನಗರದಲ್ಲಿ ಪ್ರವಾಹ ಉಂಟಾಗುವ ಪ್ರದೇಶಗಳಾದ ಕುವೆಂಪು ಬಡಾವಣೆ, ಸಾಯಿ ಬಡಾವಣೆ, ಕಣಿವೆ, ಕೊಪ್ಪ ಇತ್ಯಾದಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದರು.

ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಆರಕ್ಷಕ ಅಧೀಕ್ಷಕರು, ಉಪವಿಭಾಗಾಧಿಕಾರಿಗಳು, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು ಮತ್ತು ಇತರೆ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: